ಬಂಟ್ವಾಳ: ಟೆಂಪೋ ಢಿಕ್ಕಿ; ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ಸ್ಥಳದಲ್ಲೇ ಮೃತ್ಯು

Spread the love

ಬಂಟ್ವಾಳ: ಟೆಂಪೋ ಢಿಕ್ಕಿ; ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊಪದವು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಫರಂಗಿಪೇಟೆ ಸಮೀಪದ 10ನೇ ಮೈಲಿಗಲ್ಲು ನಿವಾಸಿ ದಿ. ಉನೈಸ್ ಎಂಬವರ ಪುತ್ರಿ ಆಶಿಕ (3) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಮಗು ಬಂಟ್ವಾಳ ಸಮೀಪದ ಲೊರೆಟ್ಟೋಪದವಿನ ತನ್ನ ಅಜ್ಜಿಯ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ ಮನೆಯ ಮುಂಭಾಗ ನಿಲ್ಲಿಸಿದ್ದ ಟೆಂಪೋವಿನ ಗೇರ್ ಅನ್ನು ಮಕ್ಕಳು ಎಳೆದಿದ್ದು, ಈ ವೇಳೆ ಟೆಂಪೊ ಕೆಳಗೆ ಚಲಿಸಿ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.


Spread the love
1 Comment
Inline Feedbacks
View all comments
Madhava
1 month ago

Very sad news. 😢