Home Mangalorean News Kannada News ಬಂಟ್ವಾಳ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ತಡೆಯುವಂತೆ ಮಾಜಿ ಸಚಿವ ರಮಾನಾಥ ರೈ ಮನವಿ

ಬಂಟ್ವಾಳ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ತಡೆಯುವಂತೆ ಮಾಜಿ ಸಚಿವ ರಮಾನಾಥ ರೈ ಮನವಿ

Spread the love

ಬಂಟ್ವಾಳ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ತಡೆಯುವಂತೆ ಮಾಜಿ ಸಚಿವ ರಮಾನಾಥ ರೈ ಮನವಿ

ಮಂಗಳೂರು: ಬಂಟ್ವಾಳ ತಾಲೂಕಿನಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವುದನ್ನು ತಡೆಯುವಂತೆ ಕೋರಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಬಂಟ್ವಾಳ ತಾಲೂಕಿನಲ್ಲಿ ಮುಖ್ಯವಾಗಿ ಮಣಿನಾಲ್ಕೂರು, ಕಡೇಶ್ವಾಲ್ಯ, ಕರ್ಪೆ ಪ್ರದೇಶದಲ್ಲಿ ವ್ಯಾಪಕವಾದ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿದೆ. ಕಡೇಶ್ವಾಲ್ಯ ದಲ್ಲಿ ಮರಳು ಗಾರಿಕೆ ಪಡೆದ ಗುತ್ತಿಗೆದಾರ ರೊಬ್ಬರು ಇತರ ಕಡೆಗಳಲ್ಲಿ ಅಕ್ರಮ ಮರಳುಗಾರಿಕೆಗೆ ಸಹಕರಿಸುತ್ತಿದ್ದರು ಅವರ ಮೂಲಕ ಅಕ್ರಮಮರಳುಗಾರಿಕೆ ನಡೆಯುತ್ತಿದೆ.

ರಾಜಾರೋಷವಾಗಿ ಈ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಗಣಿಗಾರಿಕೆಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಇದನ್ನು ನಿಯಂತ್ರಣ ಮಾಡಲು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಅನೇಕ ಬಾರಿ ಸಂಬಂಧಪಟ್ಟವರಿಗೆ ತಿಳಿಸಿದರೂ ರಾಜಕೀಯ ಪ್ರಭಾವದಿಂದ ಇದರ ಬಗ್ಗೆ ಕ್ರಮ ಕೈಗೊಳ್ಳಲು ಇಲಾಖೆಯು ನಿಷ್ಕ್ರಿಯ ವಾಗಿದ್ದಾರೆ. ಅಕ್ರಮ ಮರಳುಗಾರಿಕೆ ದಂಧೆ ಮಾಡುವ ವ್ಯಕ್ತಿಗಳು ಕ್ಷೇತ್ರದ ಶಾಸಕರ ನಿಕಟವರ್ತಿಗಳಾಗಿದ್ದ ಅವರ ಒತ್ತಡದಿಂದಾಗಿ ಇಲಾಖೆಯು ಕ್ರಮ ಕೈಗೊಳ್ಳುತ್ತಿಲ್ಲ. ಈ ಸಂಬಂಧವಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.

ಆದ್ದರಿಂದ ಜಿಲ್ಲಾಧಿಕಾರಿಗಳು ನಿಸ್ಪಕ್ಷಪಾತವಾಗಿ ಅಗತ್ಯವಾದ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.


Spread the love

Exit mobile version