ಬಂಟ್ವಾಳ, ಸುಳ್ಯ, ಪತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 11 ರ ತನಕ ನಿಷೇಧಾಜ್ಞೆ ವಿಸ್ತರಣೆ

Spread the love

ಬಂಟ್ವಾಳ, ಸುಳ್ಯ, ಪತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 11 ರ ತನಕ ನಿಷೇಧಾಜ್ಞೆ ವಿಸ್ತರಣೆ

ಮ0ಗಳೂರು :ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗೆ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಸಂಬಂಧಿಸಿದಂತೆ ಮಾತ್ರ ಅಂದರೆ ಬಂಟ್ವಾಳ, ಸುಳ್ಯ, ಪತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 04 ರ ಮಧ್ಯರಾತ್ರಿ 12 ಗಂಟೆಯಿಂದ ಜುಲೈ 11 ರ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಜುಲೈ 4 ರ ಮಧ್ಯರಾತ್ರಿವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಿದೆ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸ್ಪೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಕೋಮು ಸೌಹಾರ್ದಕ್ಕೆ ದಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಛರಿಸುವುದು ಅಥವಾ ಪದ ಹಾಡುವುದು, ಚೇಷ್ಠೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವ ಮತ್ತು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಲಾಗಿದೆ.


Spread the love
1 Comment
Inline Feedbacks
View all comments
road bikes under 1000
7 years ago

Simply want to say your article is as surprising. The clearness for
your submit is just cool and i could assume
you’re a professional in this subject. Fine together with
your permission let me to grab your RSS feed to stay up to date with approaching post.
Thank you one million and please keep up the rewarding work.