ಬಂಟ್ವಾಳ: ಹೋಟೆಲ್ ನಲ್ಲಿ ತಂಗಿದ್ದ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ
ಬಂಟ್ವಾಳ: ಬಿ.ಸಿ.ರೋಡಿನ ಹೋಟೆಲಿನಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಬಗ್ಗೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಆತ್ಯಹತ್ಯೆ ಮಾಡಿಕೊಂಡ ಯುವಕನನ್ನು ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ಎಂದು ಗುರುತಿಸಲಾಗಿದೆ.
ಮೇ 5ರಂದು ಬಿ.ಸಿ.ರೋಡಿನ ಬಸ್ ನಿಲ್ದಾಣದ ಬಳಿಯಿರುವ ಹೋಟೆಲ್ ರೂಮ್ ಪಡೆದಿದ್ದ ಪ್ರಜ್ವಲ್ ಮೇ 6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದರು. ಇಂದು ಬೆಳಿಗ್ಗೆ ರೂಮ್ ಬಾಗಿಲು ತೆರೆಯದೇ ಇದ್ದು ಹೋಟೆಲ್ ಸಿಬ್ಬಂದಿ ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ. ಆನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ನೊಂದಿದ್ದ ಎಂದು ತಿಳಿದುಬಂದಿದೆ.
ಬಂಟ್ವಾಳ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.