ಬಸ್ ಅಡ್ಡಗಟ್ಟಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಜಿಲ್ಲಾ ವಿದ್ಯಾರ್ಥಿ ಜೆಡಿಎಸ್ ವತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ
ಮಂಗಳೂರು: ತಲಪಾಡಿಯಲ್ಲಿ ಬಸ್ ಅಡ್ಡಗಟ್ಟಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ ತಂಡವನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾ ವಿದ್ಯಾರ್ಥಿ ಜನತಾದಳ ಜಿಲ್ಲಾಧ್ಯಕ್ಷರಾದ ಸಿನಾನ್ ನೇತೃತ್ವದಲ್ಲಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು.
ಯಾವುದೇ ಆರೋಪಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಕೂಡಲೇ ಬಂಧಿಸಿ ಗೂಂಡಾ ಕಾಯಿದೆ ಹಾಕಿ ತಪ್ಪಿಸ್ಥರ ಮೇಲೆ ಕಾನೂನು ರೀತಿ ಕ್ರಮ ಕೊಳ್ಳಬೇಕು ಇಲ್ಲವಾದರೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪದೇ ಪದೇ ವಿದ್ಯಾರ್ಥಿಗಳ ಮೇಲೆ ಹಲ್ಲೆ ದೈಹಿಕ ಹಲ್ಲೆ ನಡೆಯುತ್ತಿದ್ದು ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಇದೇ ಸಂದರ್ಭದಲ್ಲಿ ಜಿಲ್ಲಾ ವಿದ್ಯಾರ್ಥಿ ಜನತಾದಳದ ನಿಯೋಗ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿತು.
ಇದೇ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಹಾಝಿಕ್ ಉಮರ್, ಜಿಲ್ಲಾ ಉಪಾಧ್ಯಕ್ಷರಾದ ಸಮ್ರಾಝ್ ರಾಝಿಕ್, ಜಿಲ್ಲಾ ಸಂಚಾಲಕ ಪ್ರಸನ್ನ ಎಂ.ಎಂ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಝೀಮ್, ಬಂಟ್ವಾಳ ತಾಲ್ಲೂಕು ಅಧ್ಯಕ್ಷರು ಪ್ರಜ್ವಲ್ ಬಿ.ಪಿ, ಜಿಲ್ಲಾ ಕಾರ್ಯದರ್ಶಿ ಇರ್ಷಾದ್, ಬೆಲ್ತಂಗಡಿ ತಾಲ್ಲೂಕು ಅಧ್ಯಕ್ಷರು ರೊನಾಲ್ಡ್ ಮೋನಿಸ್, ಜಿಲ್ಲಾ ನಾಯಕರುಗಳಾದ ಮುಸವ್ವಿರ್ ಉಲ್ಲಾಲ್, ಮೊಹಮ್ಮದ್ ಸಿನಾನ್, ರಿಫಾಜ್ ಬೆಂಗ್ರೆ ಉಪಸ್ಥಿತಿ ಇದ್ದರು.