ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಆಗಮಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್
ಮಂಗಳೂರು: ಸಂಘ ಪರಿವಾರ ಹಾಗೂ ಇತರ ಸಂಘಟನೆಗಳ ತೀವ್ರ ವಿರೋಧ ಹಾಗೂ ಮಂಗಳೂರು ಬಂದ್ ನಡುವೆಯೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಗರಕ್ಕೆ ಬಿಗಿ ಭದ್ರತೆಯೊಂದಿಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಶನಿವಾರ ಬಂದಿಳಿದರು.
ಶನಿವಾರ ಬೆಳಿಗ್ಗೆ 10.25 ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಬಂದಿಳಿದ ಪಿಣರಾಯಿ ವಿಜಯನ್ ಅವರಿಗೆ ಸಿಪಿಐ ಎಮ್ ಕಾರ್ಯಕರ್ತರೂ ಅದ್ದೂರಿ ಸ್ವಾಗತ ಕೋರಿದರು.
ಪಿಣರಾಯಿ ವಿಜಯನ್ ಅವರ ಆಗಮನಕ್ಕೆ ಮುನ್ನ ರಾಜ್ಯ ಸಹಾಯಕ ಪೋಲಿಸ್ ಪೋಲಿಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮಂಗಳೂರು ನಗರ ಪೋಲಿಸ್ ಆಯುಕ್ತ ಚಂದ್ರಶೇಖರ್, ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಣ್ಣಾಮಲೈ, ಅಪರಾಧಮತ್ತು ಕಾನೂನು ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ರೈಲು ನಿಲ್ದಾಣಕ್ಕೆ ಆಗಮಿಸಿ ಭದ್ರತೆಯನ್ನು ಪರಿಶೀಲಿಶಿದರು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಗರದಲ್ಲಿ ಮಧ್ಯಾಹ್ನ ನಡೆಯಲಿರುವ ಕರಾವಳಿ ಸೌಹಾರ್ದ ರ್ಯಾಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಅಂಬೇಡ್ಕರ್ ಸರ್ಕಲ್‍ನಲ್ಲಿ ಸೌಹಾರ್ದ ರ‍್ಯಾಲಿಗೆ ಚಾಲನೆ ದೊರೆಯಲಿದೆ. ಆನಂತರ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಪಿಣರಾಯಿ ಜತೆ ಸಿಪಿಎಂ ಕರ್ನಾಟಕ ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ,