Home Mangalorean News Kannada News ಬಿದಿರಿನ ಕರಕುಶಲ ವಸ್ತುಗಳ ತಯಾರಿಕಾ ತರಬೇತಿ ಕಾರ್ಯಕ್ರಮ

ಬಿದಿರಿನ ಕರಕುಶಲ ವಸ್ತುಗಳ ತಯಾರಿಕಾ ತರಬೇತಿ ಕಾರ್ಯಕ್ರಮ

Spread the love

ಬಿದಿರಿನ ಕರಕುಶಲ ವಸ್ತುಗಳ ತಯಾರಿಕಾ ತರಬೇತಿ ಕಾರ್ಯಕ್ರಮ

ಮಂಗಳೂರು: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇವರ ವತಿಯಿಂದ ಕೊರಗ, ಸಿದ್ಧಿ, ಬುಡಕಟ್ಟು ಸಮುದಾಯದವರಿಗೆ ಬಿದಿರಿನ ಕರಕುಶಲ ವಸ್ತುಗಳ ತಯಾರಿಕಾ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಮಂಗಳೂರಿನ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮಲ್ಲಿ ನೆರವೇರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇದರ ನಿರ್ದೇಶಕರಾದ ಪ್ರೊ. ಟಿ.ಟಿ ಬಸವನಗೌಡ ಇವರು ವಹಿಸಿದ್ದರು.

pilikula-training

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಹೆಚ್. ಜಯಪ್ರಕಾಶ್ ಭಂಡಾರಿ ಇವರು ನೆರವೇರಿಸಿ ಬಿದಿರಿನ ಉತ್ಪನ್ನಗಳ ಕುರಿತ ಮಾಹಿತಿ ಹಾಗೂ ಮಹತ್ವನ್ನು ತಿಳಿಸಿದರು. ಈ ತರಬೇತಿ ಕಾರ್ಯಕ್ರಮವು 15 ದಿನಗಳ ಕಾರ್ಯಕ್ರಮವಾಗಿದ್ದು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ. ಬಿ.ಎಸ್ ಹೇಮಲತಾ ಯೋಜನಾ ಸಮನ್ವಯಾಧಿಕಾರಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೇಂದ್ರ ಸರ್ಕಾರದ ಜವಳಿ ಮಂತ್ರಾಲಯದ ಪ್ರಾದೇಶಿಕ ವಿನ್ಯಾಸ ಮತ್ತು ತಾಂತ್ರಿಕ ಅಭಿವೃದ್ಧಿ ಕೇಂದ್ರ ಬೆಂಗಳೂರು ಇಲ್ಲಿನ ಶ್ರೀ. ಕೆ.ಎಂ. ಚಲಪತಿ ಹಾಗೂ ಚಾಮರಾಜನಗರ ಜಿಲ್ಲೆಯ ಆರ್. ಚಿಕ್ಕಸಿದ್ದಯ್ಯ ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಪಿಲಿಕುಳ ನಿಸರ್ಗಧಾಮದ ಆಡಳಿತಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕೊರಗ ಸಮುದಾಯದ ಮುಖಂಡರು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು.


Spread the love

Exit mobile version