ಬೆಂಗಳೂರು ನಗರದ ಮೇಲೆ ಪಾಕ್ ಉಗ್ರರ ದಾಳಿ ಭೀತಿ: ನಗರದಾದ್ಯಂತ ಹೈಅಲರ್ಟ್ ಘೋಷಣೆ
ಬೆಂಗಳೂರು: ರಾಷ್ಟ್ರದ ಸಿಲಿಕಾನ್ ಸಿಟಿ ಎಂದೇ ಪ್ರಖ್ಯಾತವಾದ ಬೆಂಗಳೂರು ನಗರದ ಮೇಲೆ ಪಾಕಿಸ್ತಾನದ ಉಗ್ರರ ಕಾಕದೃಷ್ಟಿ ಬಿದ್ದಿದೆ. ಉದ್ಯಾನ ನಗರಿಯ ಮೇಲೆ ನಡೆಸಲು ಅದು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರು ದಿಢೀರನೆ ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ಘೋಷಿಸಿದ್ದಾರೆ. ಈ ಕುರಿತು ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,ಬೆಂಗಳೂರು ಮಾತ್ರವಲ್ಲ, ರಾಷ್ಟ್ರದ ಹಲವು ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ. ಆದ್ದರಿಂದ ಬೆಂಗಳೂರು ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ನಗರದ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತುಕುಡಿಗಳನ್ನು ಭದ್ರತಾ ಕಾರ್ಯಗಳಿಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.