ಬ್ಯಾಂಕ್ ನಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ ಕರವೇ ಪ್ರತಿಭಟನೆ, ಬಂಧನ
ಮಂಗಳೂರು: ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾನುವಾರ ಮುತ್ತಿಗೆ ಹಾಕಲು ಯತ್ನಿಸಲಾಯಿತು ಇದೇ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಬಿಗಿ ಪೊಲೀಸ್ ಬಂದು ಬಸ್ತ್ ನಲ್ಲಿ ಇದ್ದ ಕಾವೂರು ಠಾಣೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಲ.ಅನಿಲ್ ದಾಸ್ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಹೊರ ರಾಜ್ಯದವರಿಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಉದ್ಯೋಗ ನೀಡಬಾರದೆಂದು ಆಗ್ರಹಿಸಿದರು
ಇದೇ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿದ ಬ್ಯಾಂಕಿನ ಅಧಿಕಾರಿಗಳು ಈ ಎಲ್ಲಾ ವಿಚಾರವನ್ನು ನಮ್ಮ ಕೇಂದ್ರ ಕಚೇರಿಯ ಅಧಿಕಾರಿ ಜೊತೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು
ಇದೇ ಸಂದರ್ಭದಲ್ಲಿ ಮಂಗಳೂರು ತಾಲೂಕಾಧ್ಯಕ್ಷ ಮಧುಸೂದನ್ ಗೌಡ, ಮಂಗಳೂರು ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಲತಾಶ್ರೀ ಸಾಲಿಯಾನ್, ಆಟೋ ಘಟಕದ ಅಧ್ಯಕ್ಷ ಜೆರಾಲ್ಡ್ ಡಿಕೋನ, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ವಿದ್ಯಾರ್ಥಿ ಘಟಕದ ಉಪಾಧ್ಯಕ್ಷ ಸಿನಾನ್, ತೇಜಸ್ ನಾಯಕ್, ಎ.ಕೆ ಜಮಾಲ್, ಎಲಿಜಬತ್, ಶ್ರೀಧರ್ ಶೆಟ್ಟಿ, ಕನಕಪ್ಪ, ಮಂಜುನಾಥ್, ಬಾಲಕೃಷ್ಣ ಪೂಜಾರಿ, ಭೀಮಣ್ಣ, ಕಲ್ಲನಗೌಡ, ಇನ್ನು ಅನೇಕ ಕಾರ್ಯಕರ್ತರು ಬಂಧನಕ್ಕೊಳಗಾದರು