ಬ್ಯಾರಿ ಅಕಾಡೆಮಿಯಿಂದ ವಿಶ್ವ ಮಹಿಳಾ ದಿನಾಚರಣೆ

Spread the love

ಬ್ಯಾರಿ ಅಕಾಡೆಮಿಯಿಂದ ವಿಶ್ವ ಮಹಿಳಾ ದಿನಾಚರಣೆ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮುಸ್ಲಿಂ ಮಹಿಳಾ ಸಾಹಿತ್ಯ ಸಂಘದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮಾ.8ರಂದು ಕಂಕನಾಡಿಯ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10ಕ್ಕೆ ಸಮಾರಂಭವನ್ನು ಅಕಾಡೆಮಿ ಅಧ್ಯಕ್ಷ ಕರಂಬಾರ್ ಮೊಹಮ್ಮದ್ ಉದ್ಘಾಟಿಸಲಿದ್ದಾರೆ. 10.15ರಿಂದ 11.45ರ ತನಕ ‘ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ಕಾರಣ ಮತ್ತು ಪರಿಹಾರ’ ಎಂಬ ವಿಷಯ ಕುರಿತು ವಿಚಾರಗೋಷ್ಠಿ ನಡೆಯಲಿದ್ದು, ಮುಸ್ಲಿಂ ಮಹಿಳಾ ಸಾಹಿತ್ಯ ಸಂಘದ ಕಾರ್ಯದರ್ಶಿ ರುಕ್ಸಾನ ಯು. ಪ್ರಬಂಧ ಮಂಡಿಸಲಿದ್ದಾರೆ.

ಸಾಹಿತ್ಯ ಸಂಘದ ಅಧ್ಯಕ್ಷೆ ಸಮೀನಾ ಅಫ್ಶಾನ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಉಪಸಂಪಾದಕಿ ಡಾ.ಸೀತಾಲಕ್ಷ್ಮೀ ಕರ್ಕಿಕೋಡಿ, ಅನುಪಮ ಮಹಿಳಾ ಮಾಸಿಕದ ಸಂಪಾದಕಿ ಶಹನಾಝ್ ಎಂ. ಮತ್ತು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಲಹೆಗಾರ್ತಿ ಮುಮ್ತಾಝ್ ಪಕ್ಕಲಡ್ಕ ಭಾಗವಹಿಸಲಿದ್ದಾರೆ.

11.45ರಿಂದ 12 ಗಂಟೆ ತನಕ ಸಾಧಕಿಯರಾದ ಸಮಾಜಸೇವಕಿ ಖೈರುನ್ನಿಸಾ ಸಯ್ಯದ್, ಸಾಹಿತಿ ಮಫಾಝ ಶರ್ಫುದ್ದೀನ್ ಮತ್ತು ರ‍್ಯಾಂಕ್ ವಿಜೇತೆ ಆಯಿಷತ್ ರಫೀಝಾ ಅವರನ್ನು ಸನ್ಮಾನಿಸಲಾಗುವುದು.

ಮಧ್ಯಾಹ್ನ 12 ಗಂಟೆಯಿಂದ ಒಂದು ಗಂಟೆ ತನಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯೆ ಆಯಿಷಾ ಯು.ಕೆ. ಅವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದ್ದು, ಶಮೀಮಾ ಕುತ್ತಾರ್(ಬ್ಯಾರಿ), ಶಬೀನಾ ಬಾನು ವೈ.ಕೆ.(ಕನ್ನಡ), ಅಸ್ಮ ಬಜಪೆ(ಬ್ಯಾರಿ), ಝುಲೈಖಾ ಮುಮ್ತಾಝ್(ಬ್ಯಾರಿ), ಫೆಲ್ಸಿ ಲೋಬೊ(ಕೊಂಕಣಿ), ಸಮೀನಾ ಅಫ್ಶಾನ್(ಉರ್ದು), ರೂಪಕಲಾ ಆಳ್ವ(ತುಳು) ಮತ್ತು ಶಿಫಾ ಕೆ.ಎಂ.(ಬ್ಯಾರಿ) ಕವನ ವಾಚನ ಮಾಡಲಿದ್ದಾರೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love