Home Mangalorean News Kannada News ಬ್ರಹ್ಮಾವರ : ಚೇಂಪಿ ಜಿ.ಎಸ್.ಬಿ ವೃತ್ತಿ ಮಾರ್ಗದರ್ಶನ ಶಿಬಿರ

ಬ್ರಹ್ಮಾವರ : ಚೇಂಪಿ ಜಿ.ಎಸ್.ಬಿ ವೃತ್ತಿ ಮಾರ್ಗದರ್ಶನ ಶಿಬಿರ

Spread the love

ಬ್ರಹ್ಮಾವರ: ಶಿಕ್ಷಣ ಕ್ಷೇತ್ರದಲ್ಲಿ ಇಂದು ಹಲವಾರು ವಿಫುಲ ಅವಕಾಶಗಳಿವೆ. ಆದರೆ ಗ್ರಾಮೀಣ ಪ್ರದೇಶದ ವಿದ್ಯಾಥರ್ಿಗಳಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನದ ಕೊರತೆಯಿಂದಾಗಿ ಅವರು ಈ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕಾರ್ಪೋರೇಶನ್ ಬ್ಯಾಂಕ್ನ ನಿವೃತ್ತ ಮಹಾಪ್ರಬಂಧಕ ಬಿ.ಆರ್.ಭಟ್ ಹೇಳಿದರು.

ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರದಲ್ಲಿ ಚೇಂಪಿ ಗೌಡ ಸಾರಸ್ವತ ಸಮಾಜ ಸೇವಾ ಸಂಘ, ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಸರಣಿ ಕಾರ್ಯಕ್ರಮದಲ್ಲಿ ವಿದ್ಯಾಭ್ಯಾಸ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ನಂತರ ಮುಂದೇನು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

chempi

ಸಂಪನ್ಮೂಲ ವ್ಯಕ್ತಿ ಎಕ್ಸ್ ಪರ್ಟ್ ಗ್ರೂಪ್ನ ಮುಖ್ಯಸ್ಥ ನರೇಂದ್ರ ಎಲ್ ನಾಯಕ್ ವಿದ್ಯಾರ್ಥಿಗಳು ವಿಷಯವನ್ನು ಆಯ್ದುಕೊಳ್ಳುವ ಮೊದಲು ಯಾಕೆ ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ. ಇದರಿಂದ ನನಗೆ ಏನು ಲಾಭ ಎನ್ನುವುದನ್ನು ಆಲೋಚಿಸಬೇಕಾಗಿದೆ. ಪೋಷಕರು ಸಹ ಅಗತ್ಯ ಸಲಹೆ, ಮಾರ್ಗದರ್ಶನ ನೀಡಿದಲ್ಲಿ ಅವರ ಭವಿಷ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು.

ಚೇಂಪಿ ಗೌಡ ಸಾರಸ್ವತ ಸಮಾಜ ಸೇವಾ ಸಂಘದ ಅಧ್ಯಕ್ಷ ಹರೀಶ್ ರಾಧಾಕೃಷ್ಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಲೆಕ್ಕ ಪರಿಶೋಧಕ ಎಸ್.ಎಸ್ ನಾಯಕ್, ಹನುಮಾನ್ ಗ್ರೂಪ್ನ ಮುಖ್ಯಸ್ಥ ವಿಲಾಸ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಆಡಳಿತ ಮಂಡಳಿಯ ಸದಸ್ಯ ಉಮೇಶ್ ಪ್ರಭು ಸ್ವಾಗತಿಸಿದರು. ದಿನೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.


Spread the love

Exit mobile version