Home Mangalorean News Kannada News ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಘಟಕ ಉದ್ಘಾಟನೆ

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಘಟಕ ಉದ್ಘಾಟನೆ

Spread the love

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಘಟಕ ಉದ್ಘಾಟನೆ

ಬ್ರಹ್ಮಾವರ: ಜನರ ಸೇವೆಗಾಗಿ ತನ್ನ ಬದುಕನ್ನು ಮುಡಿಪಾಗಿಸಿರುವ ಏಕೈಕ ಪಕ್ಷ ಅಂದರೆ ಅದು ಕಾಂಗ್ರೆಸ್ ಮತ್ತು ಅದರ ಕಾರ್ಯಕರ್ತರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

brahmavar-city-congress-unit

ಅವರು ಭಾನುವಾರ ಬ್ರಹ್ಮಾವರ ಬಂಟರ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ವಿ.ವಿಯ ಸೆನೆಟ್ ಸದಸ್ಯ ಅಮೃತ್ ಶೆಣೈ ಮಾತನಾಡಿ ಬಿ.ಜೆ.ಪಿ ಪಕ್ಷದವರು ಅಭಿವೃದ್ಧಿ ಕಡೆಗೆ ಗಮನ ಕೊಡದೇ ಬರೇ ಪ್ರಚೋದನಕಾರಿ ಮಾತುಗಳಿಂದ ಜನರನ್ನು ಭ್ರಮಾ ಲೋಕದಲ್ಲಿ ಮುಳುಗಿಸಿ ಪ್ರಗತಿ ಪಥದಲ್ಲಿ ಸಾಗದೇ ಶಿಲಾಯುಗಕ್ಕೆ ದೇಶವನ್ನು ತೆಗೆದುಕೊಂಡು ಹೋಗುತ್ತಾ ಇದ್ದಾರೆ. ಆದರೆ ಕಾಂಗ್ರೆಸ್ ಪಕ್ಷದವರದ್ದು ಹೃದಯದಿಂದ ಬರುವ ಮಾತುಗಳು. ಜಾತ್ಯಾತೀಯ, ಧರ್ಮಾತೀತವಾಗಿ ದೇಶವನ್ನು ಕಟ್ಟಿ ಆಳಿದವರು ಎಂದು ಹೇಳಿದರು.

ಇದೇ ಸಂದರ್ಭ ಸಚಿವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ನಗರ ಘಟಕದ ವತಿಯಿಂದ ಬ್ರಹ್ಮಾವರವನ್ನು ತಾಲ್ಲೂಕು/ಪುರಸಭೆಯನ್ನಾಗಿ ಮಾಡಿ ನಗರದಲ್ಲಿರುವ ತ್ಯಾಜ್ಯ, ಒಳಚರಂಡಿ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಮನವಿ ನೀಡಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿತ್ಯಾನಂದ ಬಿ.ಆರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಜನಾರ್ಧನ ತೋನ್ಸೆ, ಸುಧಾಕರ ಶೆಟ್ಟಿ ಮೈರ್ಮಾಡಿ, ಮಾಜಿ ಸದಸ್ಯೆ ಮಲ್ಲಿಕಾ ಬಿ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಅಮೀನ್, ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಮಾಜಿ ಅಧ್ಯಕ್ಷೆ ವೆರೋನಿಕಾ ಕರ್ನೆಲಿಯೋ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಗೋಪಿ ಕೆ ನಾಯ್ಕ, ದಿನಕರ ಹೇರೂರು, ಡಾ.ಸುನೀತಾ ಶೆಟ್ಟಿ, ಕೆಡಿಪಿ ಸದಸ್ಯ ಚೇರ್ಕಾಡಿ ಉಮೇಶ ನಾಯ್ಕ, ಜಿಲ್ಲಾ ಎಸ್.ಸಿ ಎಸ್.ಟಿ ಘಟಕದ ಅಧ್ಯಕ್ಷ ಎಸ್.ನಾರಾಯಣ, ಚಾಂತಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ನಾಯ್ಕ, ಹಾರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಯುವ ಕಾಂಗ್ರೆಸ್‍ನ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಸ್ವಾಗತಿಸಿದರು. ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿತ್ಯಾನಂದ ಬಿ.ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನೂತನ ಘಟಕದ ಅಧ್ಯಕ್ಷ ಎಸ್.ರಾಜೇಶ್ ಶೆಟ್ಟಿ ವಂದಿಸಿದರು.


Spread the love

Exit mobile version