ಭಾರತ್ ಬಂದ್ – ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ
ಉಡುಪಿ: ಸೋಮವಾರ ಸೆ.10 ರಂದು ಭಾರತ ಬಂದ್ ಕರೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಸೋಮವಾರ ಸೆ.10 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.