ಭಾರಿ ಮಳೆ; ಬೆಳ್ತಂಗಡಿಯ ನದಿಯಲ್ಲಿ ಕೊಚ್ಚಿ ಹೋದ ಮಹಿಳೆ
ಮಂಗಳೂರು: ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮಹಿಳೆಯೋರ್ವರು ಹೊಳೆಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ಶಿರ್ಲಾಲ್ ಬಳಿಯ ರೇವತಿ(50) ಎಂದು ಗುರುತಿಸಲಾಗಿದೆ.
ರೇವತಿ(50) ಇವರು ಹೊಳೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಹೊಳೆಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ. ಮೃತದೇಹ ಪತ್ತೆಯಾಗಿದೆ.
ಮೃತರು ಮೂವರು ಪುತ್ರಿಯರು, ಇಬ್ಬರು ಪುತ್ರರನ್ನು ಅಗಲಿದ್ದು, ಮಕ್ಕಳ ಪೈಕಿ ಇಬ್ಬರು ಮೂಗರು ಎಂದು ತಿಳಿದುಬಂದಿದೆ.
ವೇಣೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.