Home Mangalorean News Kannada News ಭಾರಿ ಮಳೆ ಹಿನ್ನಲೆ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

ಭಾರಿ ಮಳೆ ಹಿನ್ನಲೆ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

Spread the love

ಭಾರಿ ಮಳೆ ಹಿನ್ನಲೆ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಗುರುವಾರದಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ನೀಡಿದ್ದಾರೆ.

ಗುರುವಾರದಿಂದ ಜಿಲ್ಲೆಯಾದ್ಯಂತ್ಯ ಭಾರಿ ಮಳೆ ಸುರಿಯುತ್ತಿದ್ದು ಶುಕ್ರವಾರವೂ ಸಹ ಮುಂದುವರೆದ ಪರಿಣಾಮ ಮಳೆಗೆ ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳಲು ಪರದಾಡುವ ಪರಿಸ್ಥಿತಿ ಉಂಟಾಗಿದ್ದು, ಅಲ್ಲದೆ ಹಳ್ಳಗಳು, ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಶುಕ್ರವಾರ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ನೀಡಿದ್ದಾರೆ.


Spread the love

Exit mobile version