ಭಾರೀ ಮಳೆ: ಅಗಸ್ಟ್ 8 ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಉಡುಪಿ: ಭಾರೀ ಮಳೆಯಾಗುತ್ತಿರುವ ಕಾರಣ ಗುರುವಾರ ಅಗಸ್ಟ್ 8ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜುಗಳಿಗೆ ಒಂದು ದಿನದ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ರಾಜ್ಯದ ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ವಿಪರೀತ ಮಳೆ(205 ಮೀ.ಮೀ) ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಭಾರೀ ಗಾಳಿ ಬೀಸುವ ಸಂಭವವಿರುವುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿರುವುದರಿಂದ ಸಮುದ್ರ ಹಾಗೂ ನದಿಗಳಲ್ಲಿ ಮೀನುಗಾರಿಕೆಗೆ ಹಡಗು ಮತ್ತು ದೋಣಿಗಳು ತೆರಳದಂತೆ ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರು ಹೋಗದಂತೆ ಎಚ್ಚರ ವಹಿಸುವುದು ಹಾಗೂ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮವಾಗಿ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ತಮ್ಮ ಮೊಬೈಲ್ / ಕಚೇರಿ ದೂರವಾಣಿ / ವಾಹನ ಅಗತ್ಯ ಪರಿಕ್ರಮಗಳನ್ನು ಸದಾ ಸನ್ನದ್ಧರಾಗಿರಿಸಿಕೊಂಡು ತಕ್ಷಣವೇ ಸ್ಪಂದಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.