Home Mangalorean News Kannada News ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಕಟಿಬದ್ಧ – ಸಚಿವ ಮಧ್ವರಾಜ್

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಕಟಿಬದ್ಧ – ಸಚಿವ ಮಧ್ವರಾಜ್

Spread the love

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಕಟಿಬದ್ಧ – ಸಚಿವ ಮಧ್ವರಾಜ್

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಕಟಿಬದ್ಧರಾಗಿದ್ದು, ಅದಕ್ಕಾಗಿ ವಿಶೇಷ ತಂಡ ರಚಿಸುವ ಬಗ್ಗೆ ಜಿಲ್ಲಾ ಪೋಲಿಸ್ ಅಧಿಕ್ಷಕರಿಗೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣವನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಬುಧವಾರ ಜಿಲ್ಲಾ ಸಮಸ್ತ ಬಂಟರ ಸಂಘಟನೆಗಳಿಂದ ಮನವಿ ಸ್ವೀಕರಿಸಿ ಮಾತನಾಡುತ್ತಿದ್ದರು.

ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲುವ ನಿಟ್ಟಿನಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿರುವ ಮಣಿಪಾಲ ಪೋಲಿಸ್ ನಿರೀಕ್ಷಕ ಗೀರಿಶ್ ಅವರನ್ನು ಜವಾಬ್ದಾರಿಯಿಂದ ತೆಗೆದು ಆ ಸ್ಥಾನಕ್ಕೆ ಕಾರ್ಕಳ ಎಎಸ್ಪಿ ಸುಮನ್ ಐಪಿಎಸ್ ಅವರನ್ನು ನೇಮಕ ಮಾಡಲಾಗಿದೆ ಎಂದರು.

bunt-protest-bhaskar-shetty-murder-case-20180810-18

ಪ್ರಕರಣದ ತನಿಖೆ ಸಂದರ್ಭದಲ್ಲಿ ತನಿಖಾಧಿಕಾರಿಯಾಗಿರುವ ಮಣಿಪಾಲ ಪೋಲಿಸ್ ನಿರೀಕ್ಷಕ ಗಿರೀಶ್ ತನ್ನ ಜೀಪಿನ ಮುಂದಿನ ಸೀಟಿನಲ್ಲಿ ಆರೋಪಿ ನವನೀತ್ ನನ್ನು ಕುಳ್ಳಿರಿಸಿಕೊಂಡು ಹೋಗಿರುವ ವೀಡಿಯೊವನ್ನು ನಾನು ವಿಕ್ಷೀಸಿದ್ದೇನೆ. ಅದನ್ನು ಮಂಗಳೂರು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಅವರಿಗೂ ಕಳುಹಿಸಿದ್ದು, ಗಿರೀಶ್ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.

ಈಗಾಗಲೇ ಬೇರೆ ಜಿಲ್ಲೆಗೆ ವರ್ಗಾವಣೆಗೊಂಡಿರುವ ಪ್ರಾಮಾಣಿಕ ಪೋಲಿಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ಪ್ರಕರಣದ ತನಿಖೆಯ ಜವಾಬ್ದಾರಿ ನೀಡಲು ಸಾಧ್ಯವೇ ಎಂಬುದರ ಬಗ್ಗೆ ಗೃಹಸಚಿವರು ಹಾಗೂ ಹಿರಿಯ ಪೋಲಿಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹಾಗೂ ಭಾಸ್ಕರ್ ಶೆಟ್ಟಿಯವರ ತಾಯಿ ಗುಲಾಬಿ ಶೆಡ್ತಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಮನವಿ ಸಲ್ಲಿಸಿದರು.

ಸಭೆಯ ಅಧ್ಯಕ್ಷತೆಯನ್ನು ಉಡುಪಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸದ್ದರು.


Spread the love

Exit mobile version