Home Mangalorean News Kannada News ಭೂಕುಸಿತ: ಚಾರ್ಮಾಡಿ, ಶಿರಾಡಿ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧ

ಭೂಕುಸಿತ: ಚಾರ್ಮಾಡಿ, ಶಿರಾಡಿ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧ

Spread the love

ಭೂಕುಸಿತ: ಚಾರ್ಮಾಡಿ, ಶಿರಾಡಿ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧ

ಮಂಗಳೂರು/ ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಭಾರಿ ಪ್ರಮಾಣದ ಮಳೆ ಹಾಗೂ ಗಾಳಿಯಿಂದಾಗಿ ಭೂಕುಸಿತ, ಗುಡ್ಡ ಕುಸಿತ ಮುಂದುವರಿದಿದ್ದು, ಇದೇ 14ರ ಮಧ್ಯರಾತ್ರಿವರೆಗೂ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಗುಡ್ಡ ಕುಸಿತ ಜಾಗದಲ್ಲಿ ಪದೇ ಪದೇ ವಾಹನ ದಟ್ಟಣೆ ಉಂಟಾಗುತ್ತಿರುವುದರಿಂದ ಕುಸಿತದ ಮಣ್ಣನ್ನು ತೆರವು
ಗೊಳಿಸಲು ಕಷ್ಟವಾಗುತ್ತಿದೆ. ಅಲ್ಲದೇ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಇನ್ನಷ್ಟು ಹಾನಿಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌, ವಾಹನ ಸಂಚಾರ ನಿಷೇಧಿಸಿದ್ದಾರೆ.

ಶಿರಾಡಿ ಘಾಟಿಯಲ್ಲಿ ಸಕಲೇಶಪುರ ಬಳಿ ಭೂಕುಸಿತ ಉಂಟಾಗುತ್ತಿದ್ದು, ಶಿರಾಡಿಯಲ್ಲಿ ಇದೇ 12 ರವರೆಗೆ ಸಂಚಾರ ಬಂದ್‌ ಮಾಡಿ, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸಂಪಾಜೆ ಘಾಟಿಯಲ್ಲಿ ಲಘು ವಾಹನ ಮತ್ತು ಕೆಎಸ್‌ಆರ್‌ಟಿಸಿ ಪ್ರಯಾಣಿಕ ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.


Spread the love

Exit mobile version