ಭೋಪಾಲ್ ಎನ್ಕೌಂಟರ್: ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಎಸ್.ಐ.ಓ ಪ್ರತಿಭಟನೆ
ಮಂಗಳೂರು: ಭೋಪಾಲಿನಲ್ಲಿ ವಿಚಾರಣಾಧೀನ ಕೈದಿಗಳನ್ನು ಮಧ್ಯಪ್ರದೇಶ ಪೊಲೀಸರು ಎನ್ಕೌಂಟರ್ ಮಾಡಿರುವ ಬಗ್ಗೆ ಹಲವಾರು ಅನುಮಾನಗಳು ಮಾಧ್ಯಮ ಗಳಿಂದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೊರಬರುತ್ತಿದ್ದು, ಇದರಿಂದಾಗಿ ನಾಗರಿಕ ರಲ್ಲಿ ಹಲವಾರು ಗೊಂದಲಗಳಿಗೆ ಕಾರಣವಾಗಿದೆ. ಆದ್ದರಿಂದ ಇದರ ಸತ್ಯಾಸತ್ಯತೆಯನ್ನು ಹೊರಗೆಳೆಯಲು ಉನ್ನತಮಟ್ಟದ ನ್ಯಾಯಾಂಗ ತನಿಖೆ ನಡೆಸಲು ಒತ್ತಾಯಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್.ಐ.ಓ) ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಎದುರು ನವೆಂಬರ್ 3 ರಂದು ಮಧ್ಯಾಹ್ನ ಸಮಯ 3 ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.
ಪ್ರತಿಭಟನೆಯಲ್ಲಿ ಎಸ್ ಐ ಓ ರಾಷ್ಟ್ರೀಯ ಕಾರ್ಯದರ್ಶಿ ತೌಸೀಫ್ ಅಹ್ಮದ್ ಮಡಿಕೇರಿ, ಕರ್ನಾಟಕ ರಾಜ್ಯಾಧ್ಯಕ್ಷ ಲಬೀದ್ ಶಾಫಿ, ಮಂಗಳೂರಿನ ಖ್ಯಾತ ವಕೀಲ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ದಿನೇಶ್ ಹೆಗ್ಡೆ ಉಳೇಪಾಡಿ, ಪಿಯುಸಿಎಲ್ ರಾಷ್ಟ್ರೀಯ ಉಪಾಧ್ಯಕ್ಷ ಪಿ.ಬಿ.ಡೇಸಾ ಭಾಗವಹಿಸಿ, ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ