ಮಂಗಳವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ಬಹುನೀರಿಕ್ಷಿತ ಎಸ್ಎಸ್ಎಲ್ಸಿ ಫಲಿತಾಂಶ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.
ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ ಸಂಜೆ ವೇಳೆಗೆ ಮತ್ತೊಂದು ಸುತ್ತಿನ ಸಭೆ ನಡೆಸಿದ ಪ್ರೌಢಶಿಕ್ಷಣ ಮಂಡಳಿ ನಾಳೆ ಮಧ್ಯಾಹ್ನ ಫಲಿತಾಂಶ ಪ್ರಕಟಿಸಲು ತೀರ್ಮಾನಿಸಿದೆ.
ಮಾರ್ಚ್ 22 ರಿಂದ ಏಪ್ರಿಲ್ 4 ರವರೆಗೆ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು. ಒಟ್ಟು 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು.
ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಾಳೆ ಮಧ್ಯಾಹ್ನ 12 ಗಂಟೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಿದೆ. www.kaceb.kar.nic.in ಮತ್ತು www.karresults.nic.in ವೆಬ್ಸೈಟ್ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಮೇ 1 ರಂದು ಆಯಾ ಶಾಲೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ. ಸುಮಂಗಲ ತಿಳಿಸಿದ್ದಾರೆ.
ಮಾರ್ಚ್ 22 ರಿಂದ ಏಪ್ರಿಲ್ 4 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು. ಈ ಬಾರಿ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪಾಸಾದ ವಿದ್ಯಾರ್ಥಿಗಳಿಗೆ ಮತ್ತು ಅವರ ಪಾಲಕರಿಗೆ ಎಸ್ಎಂಎಸ್ ಮೂಲಕ ಫಲಿತಾಂಶವನ್ನು ಕಳುಹಿಸಲಾಗುವುದು ಎಂದು ಸುಮಂಗಲ ಹೇಳಿದ್ದಾರೆ.