Home Mangalorean News Kannada News ಮಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಮಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

Spread the love

ಮಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೋವಿಡ್ 19 ಸೊಂಕಿತ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು , ಇಲ್ಲಿಯ ತನಕ ಒಟ್ಟು ಪ್ರಕರಣಗಳ ಸಂಖ್ಯೆ 12 ಆಗಿದೆ. ಮೂರು ಹೊಸ ಪ್ರಕರಣಗಳಲ್ಲಿ ಒಬ್ಬರು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಮಹಿಳೆ ಹಾಗೂ ಇನ್ನಿಬ್ಬರು ದೆಹಲಿಯಲ್ಲಿ ತಬ್ಲಿಫ್ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದವರಾಗಿದ್ದಾರೆ.

ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಭಾಗವಹಿಸಿದ 29 ಜನರಲ್ಲಿ 9 ಜನರ ವರದಿ ಬಂದಿದ್ದು 2 ಪಾಸಿಟಿವ್ ಮತ್ತು ಉಳಿದ 20 ಜನರ ವರದಿ ನಿರೀಕ್ಷೆಯಲ್ಲಿದ್ದೇವೆ. ಅವರ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

ತಬ್ಲೀಫ್ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದವರು ಇನ್ನು ಯಾರಾದರೂ ಇದ್ದಲ್ಲಿ ತಕ್ಷಣ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಭೇಟಿ ಮಾಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ

ಸಾಮಾಜಿಕ ಅಂತರವನ್ನು ಮನೆಯ ಒಳಗೆ ಕೂಡ ಪಾಲಿಸಬೇಕಾಗಿದ್ದು, ಆಶಾ ಕಾರ್ಯಕರ್ತೆಯರು ಮನೆ ಭೇಟಿಗೆ ಕೆಲವು ಪ್ರದೇಶಗಳಿಗೆ ಹೋದಾಗ ಒಂದೇ ಮನೆಯಲ್ಲಿ 40 – 50 ಜನರು ಗುಂಪಾಗಿ ಇರುವುದು ಕಂಡುಬಂದಿದ್ದು, ಯಾವುದೇ ಕಾರಣಕ್ಕೂ ಹಾಗೆ ಸೇರುವುದು ತಪ್ಪಾಗಿರುತ್ತದೆ


Spread the love

Exit mobile version