ಮಂಗಳೂರು: ಗುರುಪುರದ ಬಂಗ್ಲೆಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ 2 ಮಕ್ಕಳ ಶವ ಪತ್ತೆ
ಮಂಗಳೂರು: ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ.
ಮೃತ ಮಕ್ಕಳನನ್ನು ಸಫ್ವಾನ್ (16) ಮತ್ತು ಸಹಲಾ (10) ಎಂದು ಗುರುತಿಸಲಾಗಿದೆ
ಕರಾವಳಿಯಲ್ಲಿ ಮೂರು ದಿನಗಳಿಂದ ಉತ್ತಮ ಮಳೆಯಾಗಿದ್ದು ಪರಿಣಾಮ ಗುಡ್ಡಕುಸಿತ ಉಂಟಾಗಿದೆ. ಮೊದಲು ಕುಸಿತಗೊಂಡ ಮನೆ ಮಂದಿ ಮನೆ ಕುಸಿತಗೊಳ್ಳುತ್ತಿದ್ದಂತೆ ಹೊರ ಓಡಿದ್ದು ಆದರೆ ಮನೆಯಲ್ಲಿ ಮಲಗಿದ್ದ ಇಬ್ಬರು ಮಣ್ಣಿನಡಿ ಸಿಲುಕಿದ್ದರು. ಕೂಡಲೇ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ತಂಡ ಸತತ ಕಾರ್ಯಾಚರಣೆ ನಡೆಸಿ ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಹೊರತರಲು ಪ್ರಯತ್ನಿಸಿದ್ದರು. ಸತತ 4 ಗಂಟೆಗಳ ಕಾರ್ಯಾಚರಣೆಯ ಬಳಿಕ ಎರಡು ಮಕ್ಕಳ ಶವ ಪತ್ತೆಯಾಗಿದೆ.
ಈ ಮನೆಯಲ್ಲಿ ಸುಮಾರು 6 ಜನ ವಾಸವಿದ್ದರು. ಗುಡ್ಡ ಕುಸಿಯುತ್ತಿರುವುದು ತಿಳಿಯುತ್ತಿದ್ದಂತೆ ಮನೆಯವರು ಹೊರಗಡೆ ಓಡಿ ಬಂದಿದ್ದಾರೆ. ಆದರೆ ಇಬ್ಬರು ಮಕ್ಕಳು ಮನೆಯಲ್ಲಿ ಮಲಗಿದ್ದರು. ಹೀಗಾಗಿ ಮನೆಯಲ್ಲೇ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ.