ಮಂಗಳೂರಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ
ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, 51ರ ಹರೆಯದ ಪುರಷನಲ್ಲಿ ಕೊರೋನಾ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ.
ಈ 51ರ ಹರೆಯದ ವ್ಯಕ್ತಿ ಬೋಳೂರಿನವರಾಗಿದ್ದು ರೋಗಿ ಸಂಖ್ಯೆ 536 ರ ಜೊತೆಗೆ ಸಂಪರ್ಕ ಹೊಂದಿದ್ದರು. ಇವರಿಗೆ ಕೊರೋನಾ ಲಕ್ಷಣ ಕಂಡು ಬಂದಿದ್ದು ಅವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಅವರ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ದೃಢಪಟ್ಟಿದೆ.