ಮಂಗಳೂರಿನಲ್ಲಿ ಸಾಸ್ತಾನದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರಿನ ವೈದ್ಯಕೀಯ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ಸಾಸ್ತಾನ ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಕಳವಳಕಾರಿ ಘಟನೆ ವರದಿಯಾಗಿದೆ.
ಸಾಸ್ತಾನ ಎಡಬೆಟ್ಟು ನಿವಾಸಿ ನಾಗರಾಜ್ ಐತಾಳ್ ಎಂಬವರ ಪುತ್ರಿ ಅಂಬಿಕಾ ಐತಾಳ್(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಅಂಬಿಕಾ ಮಂಗಳೂರಿನ ಕಾಲೇಜೊಂದರಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು.
ಕದ್ರಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.