Home Mangalorean News Kannada News ಮಂಗಳೂರು:ಎತ್ತಿನ ಹೊಳೆ ಯೋಜನೆ ವಿರುದ್ದ ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಪ್ರತಿಭಟನೆ

ಮಂಗಳೂರು:ಎತ್ತಿನ ಹೊಳೆ ಯೋಜನೆ ವಿರುದ್ದ ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಪ್ರತಿಭಟನೆ

Spread the love

ಮಂಗಳೂರು: ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ 5 ಸಾವಿರಕ್ಕೂ ಹೆಚ್ಚು ಜನ ದಕ್ಷಿಣ ಕನ್ನಡದ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಮೂರು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು.

10-yetinahole-protest-009

ನೇತ್ರಾವತಿ ನದಿ ತಿರುವು ವಿರೋಧಿ ಹೋರಾಟ ಸಮಿತಿಯಿಂದ ಬೆಳಗ್ಗೆ 10 ಗಂಟೆಯಿಂದ ಅರ್ಧ ಗಂಟೆ ಅನುಮತಿ ಪಡೆದು, 3 ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಹೀಗಾಗಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.

ಈ ವೇಳೆ ಪ್ರತಿಭಟನೆ ಮಾಡುತ್ತಿದ್ದ ನೂರಾರು ಜನರನ್ನು ಪೊಲೀಸರು ಬಂಧಿಸಿದರು. ಮಳೆಯನ್ನು ಲೆಕ್ಕಿಸದೇ ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು. ಮಧ್ಯಾಹ್ನದ ಹೊತ್ತಿಗೆ ಜೈಲ್ ಭರೋ ಕರೆಯಂತೆ ಪ್ರತಿಭಟನಾಕಾರರು ಸಾಮೂಹಿಕ ಬಂಧನಕ್ಕೊಳಗಾದರು.

ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವಸಂತ ಬಂಗೇರಾ ಶಕುಂತಲಾ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದರು. ಅಲ್ಲದೆ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಓಡಿಯೂರು ಮಠದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಮಹಾಲಕ್ಷ್ಮೀ ದೇವಳದ ಶ್ರೀ ಮೋಹನದಾಸ ಪರಹಂಸ ಸ್ವಾಮೀಜಿ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಬಜರಂಗದಳ ಸಂಚಾಲಕ ಶರಣ್ ಪಂಪ್ ವೆಲ್, ತುಳು ಚಲನಚಿತ್ರ ನಟ ಅರ್ಜುನ್ ಕಾಪಿಕಾಡ್ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವವಹಿಸದ್ದರು. ಮಧ್ಯಾಹ್ನದ ಬಳಿಕ ರಸ್ತೆ ಸಂಚಾರ ಯಥಾಸ್ಥಿತಿಗೆ ಮರಳಿತು.


Spread the love

Exit mobile version