Home Mangalorean News Kannada News ಮಂಗಳೂರು : ಕನ್ನಡ ರಾಜ್ಯೋತ್ಸವ – ಪೂರ್ವಭಾವಿ ಸಭೆ  

ಮಂಗಳೂರು : ಕನ್ನಡ ರಾಜ್ಯೋತ್ಸವ – ಪೂರ್ವಭಾವಿ ಸಭೆ  

Spread the love
RedditLinkedinYoutubeEmailFacebook MessengerTelegramWhatsapp

ಮಂಗಳೂರು : ಕನ್ನಡ ರಾಜ್ಯೋತ್ಸವ – ಪೂರ್ವಭಾವಿ ಸಭೆ  

ಮಂಗಳೂರು : ಕನ್ನಡ ರಾಜ್ಯೋತ್ಸವ ದಿನದಂದು ನಡೆಯುವ ಮೆರವಣಿಗೆಯಲ್ಲಿ ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ರೀತಿಯ ಟ್ಯಾಬ್ಲೋ ತಯಾರಿಸದಂತೆ ಜಾಗೃತಿ ವಹಿಸಿ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು.

ಶುಕ್ರವಾರ ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಗಳೂರು ಮಹಾನಗರಪಾಲಿಕೆ ಸಾರ್ವತ್ರಿಕ ಚುನವಣೆ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಹಿನ್ನಲೆಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆದುದರಿಂದ ಚುನಾವಣೆಗೆ ಸಂಬಂಧಪಟ್ಟಂತೆ ಪ್ರಚೋದನೆಗೆ ಒಳಪಡುವಂತಹ ಟ್ಯಾಬ್ಲೋ ಇರಬಾರದು. ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಸಂಭ್ರಮದಿಂದ ಆಚರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯುವಂತಹ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಟ್ಯಾಬ್ಲೋಗಳ ಜವಾಬ್ದಾರಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿಭಾಯಿಸಬೇಕು. ಕಾರ್ಯಕ್ರಮಗಳಲ್ಲಿ ಹಾಗೂ ಟ್ಯಾಬ್ಲೋಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಮಹತ್ವ ನೀಡಿ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ(ಹಾಡು, ನೃತ್ಯ, ನಾಟಕ ಇತ್ಯಾದಿ) ಕನ್ನಡ ಭಾಷೆಯ ಹಾಡುಗಳನ್ನೇ ಬಳಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮೆರವಣಿಗೆಯಲ್ಲಿ ಭಾಗವಹಿಸುವಂತಹ ಟ್ಯಾಬ್ಲೋಗಳಿಗೆ ಹಾಗೂ ಪುರಭವನದಲ್ಲಿ ನಡೆಯವಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಹ ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಬೇಕು. 2019 ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜೋತ್ಸವದ ಸಂಭ್ರಮಾಚರಣೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


Spread the love
RedditLinkedinYoutubeEmailFacebook MessengerTelegramWhatsapp

Exit mobile version