ಮಂಗಳೂರು| ಕರ್ತವ್ಯ ಲೋಪ: ಜೈಲು ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅಮಾನತು

Spread the love

ಮಂಗಳೂರು| ಕರ್ತವ್ಯ ಲೋಪ: ಜೈಲು ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅಮಾನತು

ಮಂಗಳೂರು: ಪೊಲೀಸರು ಜೈಲ್‌ಗೆ ದಾಳಿ ನಡೆಸಿದ ಸಂದರ್ಭ ನಿಷೇಧಿತ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಜೈಲು ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶದ ತನಕ ಅಮಾನತುಗೊಳಿಸಿ ಬುಧವಾರ ಆದೇಶ ಹೊರಡಿಸಲಾಗಿದೆ.

ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್.ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.


Spread the love