Home Mangalorean News Kannada News ಮಂಗಳೂರು ಗೋಲಿಬಾರ್: ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ

ಮಂಗಳೂರು ಗೋಲಿಬಾರ್: ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ

Spread the love

ಮಂಗಳೂರು ಗೋಲಿಬಾರ್: ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ

ಮಂಗಳೂರು: ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರ ಗೋಲಿಬಾರ್’ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಬಳಿಕ ಅವರು ವಿವಿಧ ಸಮುದಾಯದ ಮುಖಂಡರನ್ನು ಭೇಟಿಯಾಗಿ, ಅಹವಾಲು ಆಲಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ದ.ಕ. ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಶಾಸಕರಾದ ಯು.ಟಿ. ಖಾದರ್, ವೇದವ್ಯಾಸ ಕಾಮತ್, ಬಿ.ಎಂ. ಫಾರೂಕ್, ಐವನ್ ಡಿಸೋಜಾ , ರಾಜೇಶ್ ನಾಯಕ್, ಮಾಜಿ ಶಾಸಕರಾದ ಮೊಹಿದೀನ್ ಬಾವಾ, ಜೆ.ಆರ್. ಲೋಬೋ, ಸೆಂಟ್ರಲ್ ಮುಸ್ಲಿಂ ಕಮಿಟಿ ಅಧ್ಯಕ್ಷ ಮುಹಮ್ಮದ್ ಮಸೂದ್ ಮತ್ತಿತರರು ಇದ್ದರು.


Spread the love

Exit mobile version