ಮಂಗಳೂರು:  ಗ್ರಾಮ ಪಂಚಾಯತ್ ಚುನಾವಣೆ ಮಾದರಿ ನೀತಿಸಂಹಿತೆ

Spread the love

ಮಂಗಳೂರು: ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ನಡೆಸುವ ಬಗ್ಗೆ ಚುನಾವಣಾ ವೇಳಾ ಪಟ್ಟಿಯನ್ನು  ಘೋಷಿಸಲಾಗಿದ್ದು, ಮೇ 10 ರಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುತ್ತದೆ.

ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುವುದರಿಂದ, ಚುನಾವಣಾ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ಮತ್ತು ರಾಜಕೀಯ ಮುಖಂಡರ ಬಾವಚಿತ್ರಗಳನ್ನು ಉಪಯೋಗಿಸಿಕೊಂಡು ಪ್ರಚಾರ ನಡೆಸುವಲ್ಲಿ ಮತ್ತು ಕರಪತ್ರ, ಪೋಸ್ಟರ್ ಅಥವಾ ಇನ್ಯಾವುದೇ ಪ್ರಚಾರ ಸಾಧನಗಳನ್ನು ಬಳಸಿಕೊಂಡು ಚುನಾವಣಾ ಪ್ರಚಾರ ನಡೆಸುವ ಅವಕಾಶವಿರುವುದಿಲ್ಲ.

ಅದಾಗ್ಯೂ ಜಿಲ್ಲೆಯ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ರಾಜ್ಯ ಚುನಾವಣಾ ಆಯೋಗ ಜಾರಿಗೆ ತಂದಿರುವ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನವಣಾ ಪ್ರಚಾರ ನಡೆಸುವುದು ಕಂಡು ಬಂದಲ್ಲಿ , ಚುನಾವಣಾ ಪ್ರಚಾರ ಸಾಧನಗಳನ್ನು ಮುಟ್ಟುಗೋಲು ಹಾಕಿಕೊಂಡು ಅಭ್ಯರ್ಥಿಯ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿರುತ್ತಾರೆ.


Spread the love