Home Mangalorean News Kannada News ಮಂಗಳೂರು ಚಲೋ: ಕಮೀಷನರೆಟ್ ವ್ಯಾಪ್ತಿಯಲ್ಲಿ ಗುರುವಾರ ಮದ್ಯ ಮಾರಾಟ ನಿಷೇಧ

ಮಂಗಳೂರು ಚಲೋ: ಕಮೀಷನರೆಟ್ ವ್ಯಾಪ್ತಿಯಲ್ಲಿ ಗುರುವಾರ ಮದ್ಯ ಮಾರಾಟ ನಿಷೇಧ

Spread the love
RedditLinkedinYoutubeEmailFacebook MessengerTelegramWhatsapp

ಮಂಗಳೂರು ಚಲೋ: ಕಮೀಷನರೆಟ್ ವ್ಯಾಪ್ತಿಯಲ್ಲಿ ಗುರುವಾರ ಮದ್ಯ ಮಾರಾಟ ನಿಷೇಧ

ಮಂಗಳೂರು: ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ವತಿಯಿಂದ ಮಂಗಳೂರು ಪೋಲಿಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿ ಸಂಬಂಧ ಕಾರ್ಯಕ್ರಮ ನಡೆಯುವ ನಗರದ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಪ್ಟೆಂಬರ್ 7 ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿಗಳು  ನಗರ ಪೋಲಿಸ್ ಆಯುಕ್ತರ ಮನವಿ ಮೇರೆಗೆ ಕಾರ್ಯಕ್ರಮದಲ್ಲಿ ಕಿಡಿಗೇಡಿಗಳು ಅಮಲು ಪದಾರ್ತ ಸೇವಿಸಿ ಕಾನೂನು ಸುವ್ಯವಸ್ಥೆಗೆ ಭಂಗವುಂಟುಮಾಡುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಜಿ. ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version