ಮಂಗಳೂರು : ಜಿಲ್ಲಾ ನ್ಯಾಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಮಂಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಂಗಳೂರು ವಕೀಲರ ಸಂಘ, ಮತ್ತು ನ್ಯಾಯಾಂಗ ಇಲಾಖಾ ನೌಕರರ ಸಂಘ, ಮಂಗಳೂರು ಇವರ ಜಂಟೀ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾರ್ಚ್ 7 ಸಂಜೆ 5 ಗಂಟೆಗೆ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು.
ಮಾಜಿ ಲಯನ್ಸ್ ಗರ್ವರ್ನರ್ ಕವಿತಾ ಶಾಸ್ತ್ರೀ ಕಾರ್ಯಕ್ರಮ ಉದ್ಫಾಟಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಜಿಲ್ಲೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸೈಯದುನ್ನಿಸಾ ವಹಿಸಿದರು.
ಮುಖ್ಯ ಅತಿಥಿಯಾಗಿ ಮಂಗಳೂರು ರೋಶನೀ ನಿಲಯ ಪ್ರಾಚಾರ್ಯರಾದ ಡಾ. ಜುಲಿಯ ಸಿ.ಜೆ., ಮಂಗಳೂರು ಮಿಸ್ಬಾ ಮಹಿಳಾ ಕಾಲೇಜು ಪ್ರಾಚಾರ್ಯರು ಜಾಹಿದಾ ಜಲೀಲ್ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಡ್ಲೂರು ಸತ್ಯನಾರಾಯಣಾಚಾರ್ಯ,ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶಿಲ್ಪ ಎ.ಜಿ., ಕಾರ್ಯಕ್ರಮದ ಆಯೋಜಕ ಅರುಣಾ ಬಿ.ಪಿ. ಹಾಗೂ ನ್ಯಾಯಾಂಗ ಇಲಾಖೆಯ ಶೀರಸ್ತೇದಾರ್ ವಿಂದ್ಯಾ, ಮಂಗಳೂರು ಜಿಲ್ಲಾ ನ್ಯಾಯಾಲಯದ ವಿವಿಧ ಅಧೀನ ಜಿಲ್ಲಾ ನ್ಯಾಯಾಧೀಶರುಗಳು, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರು, ಪೆÇೀಕ್ಸೋ ನ್ಯಾಯಾಲಯದ, ನ್ಯಾಯಾಧೀಶರು ಹಾಗೂ ವಿವಿಧ ಶ್ರೇಣಿಯ ನ್ಯಾಯಾಲಯಗಳ ನ್ಯಾಯಾಧೀಶರು, ನ್ಯಾಯವಾದಿಗಳು ಮತ್ತು ನ್ಯಾಯಾಲಯದ ಮಹಿಳಾ ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು.