ಮಂಗಳೂರು: ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಗಳಿಗೆ ಪಟಾಕಿ ಸಿಡಿಸಲು ನಿರ್ಬಂಧ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ದಿನಾಂಕ: 05-12-2015 ರ ಮಧ್ಯರಾತ್ರಿ 12-00 ಗಂಟೆಯಿಂದ ದಿನಾಂಕ:06-12-2015 ರ ಮದ್ಯರಾತ್ರಿ 12-00 ಗಂಟೆಯವರೆಗೆ ಸಾರ್ವಜನಿಕ/ ಧಾರ್ಮಿಕ/ ರಾಜಕೀಯ ಮುಂತಾದ ಸಭೆ ಸಮಾರಂಭಗಳನ್ನು ಮತ್ತು ಮೆರವಣಿಗೆ ಹಾಗೂ ಪ್ರತಿಭಟನೆಗಳನ್ನು ನಿರ್ಬಂಧಿಸಿ ಈ ಕಛೇರಿಯಿಂದ ಈಗಾಗಲೇ ದಿನಾಂಕ: 30-11-2015 ರಂದು ಆದೇಶವನ್ನು ಹೊರಡಿಸಲಾಗಿರುತ್ತದೆ.
ಮುಂದುವರಿದು ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳಿಗೆ ಎಡೆ ಮಾಡಿಕೊಡದಂತೆ ಕ್ರಮ ವಹಿಸುವ ಹಿನ್ನಲೆಯಲ್ಲಿ, ಸದ್ರಿ ದಿನದಂದು ಯಾವುದೇ ಸ್ಪೋಟಕ ವಸ್ತುಗಳನ್ನು ಬಳಸಿ ಪಟಾಕಿ ಸಿಡಿಸುವುದನ್ನು ನಿರ್ಬಂಧಿಸಿ ಷರತ್ತು ವಿಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಸದ್ರಿ ನಿರ್ಬಂಧಿತ ಅವಧಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ಅಥವಾ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಹಕರಿಸಬೇಕಾಗಿ ವಿನಂತಿಸಿದೆ.
ಜಿಲ್ಲೆಯಲ್ಲಿ ಕಳೆದ ನವಂಬರ್ ತಿಂಗಳಿನಲ್ಲಿ ನಡೆದಿರುವ ಅಹಿತಕರ ಘಟನೆಯ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಕಾಪಾಡಲು, ಜಿಲ್ಲೆಯ ಎಲ್ಲಾ ಜನರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕಾಗಿ ಕೋರುತ್ತೇನೆ. ಯಾವುದೇ ಅಹಿತಕರ ಘಟನೆ ಕಂಡುಬಂದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳದೆ ಪೊಲೀಸ್ ಇಲಾಖೆ/ಜಿಲ್ಲಾಡಳಿತಕ್ಕೆ ತಿಳಿಸಬೇಕಾಗಿ ಜಿಲ್ಲಾಧಿಕಾರಿ ಕೋರಿದ್ದಾರೆ.


Spread the love