ಮಂಗಳೂರು: ದ.ಕ. ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಹಿಂದಿನ ಕಾಲದಿಂದಲೂ ಶಿಕ್ಷಕ ವೃತ್ತಿ ಒಂದು ಗೌರವದ ವೃತ್ತಿಯಾಗಿದೆ. ಶಿಕ್ಷಕ ಸಮಾಜ ಕಟ್ಟುವ ಕೆಲಸ ಮಾಡಬೇಕು. ಹಿಂದಿನ ಕಾಲದಲ್ಲಿ ಎಲ್ಲರಿಗೂ ಶಿಕ್ಷಣ ಪಡೆಯುವ ಹಕ್ಕಿರಲಿಲ್ಲ. ಶಿಕ್ಷಣ ಶ್ರೀಮಂತರ ಸೊತ್ತಾಗಿತ್ತು. ಇತ್ತೀಚೆಗಿನ ಸಮಾಜಿಕ ಬೆಳವಣಿಗೆಯಿಂದ ಸರ್ಕಾರದ ಆಸಕ್ತಿಯಿಂದ ಎಲ್ಲರಿಗೂ ಶಿಕ್ಷಣ ಲಭಿಸುವಂತಾಗಿದೆ. ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ತಿಳಿಸಿದರು.
ಅವರು ಇಂದು ಪುತ್ತೂರಿನಲ್ಲಿ ದ.ಕ.ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು, ದಕ.ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ತಾಲೂಕು ಮಟ್ಟದ ಶಿಕ್ಷಕರ ಸಮಿತಿ ಪುತ್ತೂರು ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳಿಗೆ ಮಾನಸಿಕವಾಗಿ ಬದುಕು ರೂಪಿಸುವವನೇ ನಿಜವಾದ ಶಿಕ್ಷಕನಾಗುತ್ತಾನೆ. ಮುಂದಿನ ಸಮಾಜ ಬಲಿಷ್ಟ ಹಾಗೂ ಸುಂದರ ಸಮಾಜವಾಗಲು ಎಲ್ಲರೂ ಶ್ರಮಿಸಬೇಕು. ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾತನಾಡಿ ಶಿಕ್ಷಕರ ಸೇವೆ ಸಮಾಜಕ್ಕೆ ಮಾತ್ರ ಸೀಮಿತವಾಗದೇ ಇಡೀ ವಿಶ್ವಕ್ಕೆ ಪಸರಿಸಬೇಕು. ಉತ್ತಮ ಸಮಾಜ ನಿರ್ಮಾಣ ಶಿಕ್ಷಕರ ಕೈಯಲ್ಲಿದೆ ಎಂದರು.
ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಸಭೆಯಲ್ಲಿ ಸನ್ಮಾನ ಸ್ವೀಕರಿಸಿದ ಎಲ್ಲರಿಗೂ ಶುಭಾಶಯ ನೀಡುತ್ತಾ ಸಾಕ್ಷರತಾ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಲು ಹೆಮ್ಮೆಯಾಗುತ್ತದೆ. ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮೊದಲನೆ ಸ್ಥಾನವನ್ನು ಪಡೆಯುವಂತೆ ಮಾಡಲು ಎಲ್ಲಾ ಶಿಕ್ಷಕರು ಶ್ರಮಿಸಬೇಕು. ನಾವು ಕಲೆ, ಸಂಸ್ಕøತಿ ಕಾಪಾಡಿ ಕೊಳ್ಳುವಂತೆ ಶಿಕ್ಷಣದ ಮೌಲ್ಯವನ್ನು ಕಾಪಾಡಿ ಕೊಳ್ಳುವುದು ನಮ್ಮೆಲ್ಲರ ಧ್ಯೇಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿಸುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾರಂಭದಲ್ಲಿ ನಿವೃತ್ತರಾದ ಶಿಕ್ಷಕರನ್ನು, ರಾಷ್ಟ್ರ, ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಪುತ್ತೂರಿನ ಶಾಸಕರಾದ ಶಕುಂತಳಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಅಶಾ ತಿಮ್ಮಪ್ಪ ಗೌಡ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀವಿದ್ಯಾ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೊ, ಸಿಪ್ರಿಯನ್ ಮೊಂತೆರೋ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಮಂಗಳೂರು: : ದ.ಕ. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ
ಮಂಗಳೂರು: ದ.ಕ.ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಹಿಂದಿನ ಕಾಲದಿಂದಲೂ ಶಿಕ್ಷಕ ವೃತ್ತಿ ಒಂದು ಗೌರವದ ವೃತ್ತಿಯಾಗಿದೆ. ಶಿಕ್ಷಕ ಸಮಾಜ ಕಟ್ಟುವ ಕೆಲಸ ಮಾಡಬೇಕು. ಹಿಂದಿನ ಕಾಲದಲ್ಲಿ ಎಲ್ಲರಿಗೂ ಶಿಕ್ಷಣ ಪಡೆಯುವ ಹಕ್ಕಿರಲಿಲ್ಲ. ಶಿಕ್ಷಣ ಶ್ರೀಮಂತರ ಸೊತ್ತಾಗಿತ್ತು. ಇತ್ತೀಚೆಗಿನ ಸಮಾಜಿಕ ಬೆಳವಣಿಗೆಯಿಂದ ಸರ್ಕಾರದ ಆಸಕ್ತಿಯಿಂದ ಎಲ್ಲರಿಗೂ ಶಿಕ್ಷಣ ಲಭಿಸುವಂತಾಗಿದೆ. ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ತಿಳಿಸಿದರು.
ಅವರು ಇಂದು ಪುತ್ತೂರಿನಲ್ಲಿ ದ.ಕ.ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು, ದಕ.ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ತಾಲೂಕು ಮಟ್ಟದ ಶಿಕ್ಷಕರ ಸಮಿತಿ ಪುತ್ತೂರು ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳಿಗೆ ಮಾನಸಿಕವಾಗಿ ಬದುಕು ರೂಪಿಸುವವನೇ ನಿಜವಾದ ಶಿಕ್ಷಕನಾಗುತ್ತಾನೆ. ಮುಂದಿನ ಸಮಾಜ ಬಲಿಷ್ಟ ಹಾಗೂ ಸುಂದರ ಸಮಾಜವಾಗಲು ಎಲ್ಲರೂ ಶ್ರಮಿಸಬೇಕು. ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾತನಾಡಿ ಶಿಕ್ಷಕರ ಸೇವೆ ಸಮಾಜಕ್ಕೆ ಮಾತ್ರ ಸೀಮಿತವಾಗದೇ ಇಡೀ ವಿಶ್ವಕ್ಕೆ ಪಸರಿಸಬೇಕು. ಉತ್ತಮ ಸಮಾಜ ನಿರ್ಮಾಣ ಶಿಕ್ಷಕರ ಕೈಯಲ್ಲಿದೆ ಎಂದರು.
ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಸಭೆಯಲ್ಲಿ ಸನ್ಮಾನ ಸ್ವೀಕರಿಸಿದ ಎಲ್ಲರಿಗೂ ಶುಭಾಶಯ ನೀಡುತ್ತಾ ಸಾಕ್ಷರತಾ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಲು ಹೆಮ್ಮೆಯಾಗುತ್ತದೆ. ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮೊದಲನೆ ಸ್ಥಾನವನ್ನು ಪಡೆಯುವಂತೆ ಮಾಡಲು ಎಲ್ಲಾ ಶಿಕ್ಷಕರು ಶ್ರಮಿಸಬೇಕು. ನಾವು ಕಲೆ, ಸಂಸ್ಕøತಿ ಕಾಪಾಡಿ ಕೊಳ್ಳುವಂತೆ ಶಿಕ್ಷಣದ ಮೌಲ್ಯವನ್ನು ಕಾಪಾಡಿ ಕೊಳ್ಳುವುದು ನಮ್ಮೆಲ್ಲರ ಧ್ಯೇಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿಸುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾರಂಭದಲ್ಲಿ ನಿವೃತ್ತರಾದ ಶಿಕ್ಷಕರನ್ನು, ರಾಷ್ಟ್ರ, ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಪುತ್ತೂರಿನ ಶಾಸಕರಾದ ಶಕುಂತಳಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಅಶಾ ತಿಮ್ಮಪ್ಪ ಗೌಡ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀವಿದ್ಯಾ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೊ, ಸಿಪ್ರಿಯನ್ ಮೊಂತೆರೋ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.