Home Mangalorean News Kannada News ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರ ಪಿಕ್ ಪಾಕೆಟ್

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರ ಪಿಕ್ ಪಾಕೆಟ್

Spread the love

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರ ಪಿಕ್ ಪಾಕೆಟ್

ಮಂಗಳೂರು: ನಗರದ ಪಿವಿಎಸ್ ಬಳಿ ಗುರುವಾರ ನಡೆದ ಬಿಜೆಪಿ ಪ್ರತಿಭಟನೆ ಸಂದರ್ಭ ಸ್ಥಳದಲ್ಲಿದ್ದ ಪೊಲೀಸ್ ಸಿಬಂದಿಯೊಬ್ಬರ ಪರ್ಸನ್ನು ಕಳ್ಳ ಎಗರಿಸಿದ ಘಟನೆ ನಡೆದಿದೆ

ಪ್ರತಿಭಟನೆ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ನೂಕಾಟ-ತಳ್ಳಾಟ ನಡೆದಿದ್ದು, ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿದ್ದಾರೆ.

ಈ ಸಂದರ್ಭಕ್ಕಾಗಿ ಹೊಂಚು ಹಾಕುತ್ತಿದ್ದ ಕಳ್ಳ “ಸಿವಿಲ್ ಡ್ರೆಸ್’ನಲ್ಲಿದ್ದ ಪೊಲೀಸ್ ಸಿಬಂದಿಯ ಪರ್ಸ್ ಎಗರಿಸಿದ್ದಾನೆ. ಸ್ಥಳದಲ್ಲಿದ್ದ ಮಾಧ್ಯಮದವರ ವೀಡಿಯೋದಲ್ಲಿ ಈ ದೃಶ್ಯ ಸೆರೆಯಾಗಿದೆ. ಆರೋಪಿಯ ಪತ್ತೆಗಾಗಿ ಶೋಧ ನಡೆಯುತ್ತಿದೆ.


Spread the love

Exit mobile version