ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸ್ಮರಣಾ ಕಾರ್ಯಕ್ರಮ

Spread the love

ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸ್ಮರಣಾ ಕಾರ್ಯಕ್ರಮ

ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ 20 ಅಂಶದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.


ಇಂದಿರಾ ಗಾಂಧಿ ದೇಶದ ಸಾಮಾಜಿಕ ಸಾಮರಸ್ಯ ಉಳಿವಿಗಾಗಿ ಮತ್ತು ಮತೀಯ ರಾಜಕೀಯ ಶಕ್ತಿಗಳ ವಿರುದ್ಧ ಹೋರಾ ಡಿದರು. ಸಾಮಾಜಿಕ ನ್ಯಾಯದಿಂದ ವಂಚಿತರಾದ ಬಡವರು, ಶೋಷಿತರು, ದಮನಿತರಿಗೆ ಧ್ವನಿಯಾದರು. ದೇಶದ ಏಕ ತೆಯ ದೃಷ್ಟಿಯಿಂದ ಅವರು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದರು. ಹಸಿರು ಕ್ರಾಂತಿ, ಶ್ವೇತ ಕ್ರಾಂತಿ, ನೀಲ ಕ್ರಾಂತಿ, ಜೀತ ಪದ್ಧತಿ ನಿರ್ಮೂಲನೆ, ರಾಜಧನ ರದ್ಧತಿ, ಬಾಂಗ್ಲಾ ವಿಮೋಚನೆ, ಬ್ಯಾಂಕುಗಳ ರಾಷ್ಟ್ರೀಕರಣ, ಕೃಷಿ ಯೋಜನೆಗೆಳಿಗೆ ಆದ್ಯತೆ ನೀಡಿ ಜನ ಸಾಮಾನ್ಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಕಾರಣರಾದರು. ಬಡತನ, ಅಸಮಾನತೆ ನಿರ್ಮೂ ಲನೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ದೇಶದ ಬೆಳವಣಿಗೆಗೆ ಇಂದಿರಾ ಗಾಂಧಿ ಸಹಕಾರಿಯಾದರು ಎಂದು ಸ್ಮರಿಸಿದರು.

ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹೀಂ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೊ, ಲೋಕಸಭಾ ಅಭ್ಯರ್ಥಿ ಪದ್ಮರಾಜ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಮಾತನಾಡಿದರು.

ಪಕ್ಷದ ಮುಖಂಡರಾದ ಕೆ.ಹರಿನಾಥ್, ಕೆ.ಪಿ.ಥೋಮಸ್, ಅಬ್ದುಲ್ ರವೂಫ್, ಲ್ಯಾನ್ಸ್ ಲೋಟೊ ಪಿಂಟೊ, ಕೆ.ಅಶ್ರಫ್, ಜೆ.ಅಬ್ದುಲ್ ಸಲೀಂ, ನವೀನ್ ಡಿಸೋಜ, ಟಿ.ಹೊನ್ನಯ್ಯ, ಶುಭೋದಯ ಆಳ್ವ, ಟಿ.ಕೆ. ಸುಧೀರ್, ವಿಶ್ವಾಸ್ ಕುಮಾರ್ ದಾಸ್, ಡಾ.ಶೇಖರ್ ಪೂಜಾರಿ, ಟಿ.ಡಿ.ವಿಕಾಸ್ ಶೆಟ್ಟಿ, ಯು.ಟಿ.ಫರ್ಝಾನ, ಕೆ.ಅಪ್ಪಿ, ಸಬಿತಾ ಮಿಸ್ಕಿತ್, ಶಬ್ಬೀರ್ ಸಿದ್ದಕಟ್ಟೆ, ಯೋಗಿಶ್ ಕದ್ರಿ, ಪ್ರೇಮ್ ಬಳ್ಳಾಲ್‌ಬಾಗ್, ಲಕ್ಷ್ಮಿನಾಯರ್, ಗೀತಾ ಅತ್ತಾವರ, ಕವಿತಾ ವಾಸು, ಚಂದ್ರಕಲಾ ಜೋಗಿ, ತನ್ವಿರ್ ಶಾ, ರೂಪಾ ಚೇತನ್, ಆರಿಫ್ ಬಂದರ್, ವಹಾಬ್ ಕುದ್ರೋಳಿ, ಜಿ.ಎ.ಜಲೀಲ್, ಹೈದರ್ ಬೋಳಾರ್, ಆಲ್ವಿನ್ ಪ್ರಕಾಶ್, ಜಾರ್ಜ್, ರವಿ ಪೂಜಾರಿ ಕೋಡಿಕಲ್ ಮತ್ತಿತರರು ಉಪಸ್ಥಿತರಿದ್ದರು. ಕೆ.ಕೆ. ಶಾಹುಲ್ ಹಮೀದ್ ಸ್ವಾಗತಿಸಿದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ವಂದಿಸಿದರು.


Spread the love