Home Mangalorean News Kannada News ಮಂಗಳೂರು: ಮಾರ್ಚ್ 5 -ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್ ನೌಕರರ ಸಭೆ

ಮಂಗಳೂರು: ಮಾರ್ಚ್ 5 -ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್ ನೌಕರರ ಸಭೆ

Spread the love

ಮಂಗಳೂರು: ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್ ನೌಕರರ ಸಂಘ (ರಿ.) ಬೆಂಗಳೂರು ಇದರ ಆಶ್ರಯದಲ್ಲಿ ಮಾರ್ಚ್ 5 ಮಧ್ಯಾಹ್ನ 2.15 ಕ್ಕೆ ಸರಕಾರಿ ಪದವಿಪೂರ್ವ ಕಾಲೇಜು ಬಲ್ಮಠ ಇಲ್ಲಿ ಮಂಗಳೂರು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರಕಾರಿ ಎನ್.ಪಿ.ಎಸ್ ನೌಕರರ ಸಮಾಲೋಚನಾ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ರಾಜ್ಯ ಸಂಘದ ಉಪಾಧ್ಯಕ್ಷರಾದ ಸಿದ್ಧಪ್ಪ ಸಂಗಣ್ಣನವರ್ ಭಾಗವಹಿಸಲಿದ್ದು, ಹೊಸ ಪಿಂಚಣಿ ಯೋಜನೆಯ ಲೋಪದೋಷಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಈ ಸಭೆಗೆ ಮಂಗಳೂರು (ಕಂದಾಯ) ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಸ ಪಿಂಚಣಿ ಯೋಜನೆಗೆ ಒಳಪಡುವ ಸರಕಾರಿ ನೌಕರರು ಭಾಗವಹಿಸಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ ಸಂತೋಷ್, ಉಪನ್ಯಾಸಕರು (9449208516), ರವಿ ಎಸ್ ಪೂಜಾರಿ (9483458458) ಇವರನ್ನು ಸಂಪರ್ಕಿಸಬಹುದಾಗಿದೆ.


Spread the love

Exit mobile version