Home Mangalorean News Kannada News ಮಂಗಳೂರು: ವಲಸೆ ಕಾರ್ಮಿಕರ ಬಗ್ಗೆ ದ.ಕ. ಜಿಲ್ಲಾಡಳಿತ ನಿರ್ಲಕ್ಷ ಆರೋಪ : ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ವಲಸೆ ಕಾರ್ಮಿಕರ ಬಗ್ಗೆ ದ.ಕ. ಜಿಲ್ಲಾಡಳಿತ ನಿರ್ಲಕ್ಷ ಆರೋಪ : ಕಾಂಗ್ರೆಸ್ ಪ್ರತಿಭಟನೆ

Spread the love

ಮಂಗಳೂರು: ವಲಸೆ ಕಾರ್ಮಿಕರ ಬಗ್ಗೆ ದ.ಕ. ಜಿಲ್ಲಾಡಳಿತ ನಿರ್ಲಕ್ಷ ಆರೋಪ : ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಜಿಲ್ಲಾಡಳಿತದ ಸೂಚನೆ ಮೇರೆಗೆ ನಗರದ ಹೊರವಲಯದ ಬಂಗ್ರ ಕೂಳೂರು ಗೋಲ್ಡ್ ಫಿಂಚ್ನ ಖಾಸಗಿ ಮೈದಾನಕ್ಕೆ ಆಗಮಿಸಿದ ವಲಸೆ ಕಾರ್ಮಿಕರಿಗೆ ಅಲ್ಲಿನ ವಾಚ್ಮೆನ್ ಮೈದಾನ ಪ್ರವೇಶಕ್ಕೆ ಅವಕಾಶ ನಿರಾಕರಿಸಿದ ಘಟನೆ ಮಂಗಳವಾರ ನಡೆದಿದೆ. ಇದರಿಂದ ಕೆಲಕಾಲ ಗೊಂದಲ ಸೃಷ್ಟಿಯಾಗಿದ್ದು, ಮಾಹಿತಿ ತಿಳಿದ ಕಾಂಗ್ರೆಸ್ ಮುಖಂಡರು ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಾಹಿತಿ ತಿಳಿದ ಶಾಸಕರಾದ ಯು.ಟಿ.ಖಾದರ್, ಐವನ್ ಡಿಸೋಜ, ಮಾಜಿ ಶಾಸಕ ಮೊಯ್ದಿನ್ ಬಾವ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು.

ಬಳಿಕ ಅಧಿಕಾರಿಗಳು ಆಗಮಿಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿದರಲ್ಲದೆ, ಕಾರ್ಮಿಕರನ್ನು ತವರೂರಿಗೆ ಕಳುಹಿಸಿಕೊಟ್ಟರು.

https://www.facebook.com/MangaloreanNews/videos/180377533138098/
ಸಾವಿರಕ್ಕೂ ಅಧಿಕ ಮಂದಿ ವಲಸೆ ಕಾರ್ಮಿಕರು ಮಂಗಳವಾರ ಮಧ್ಯಾಹ್ನ ಬಂಗ್ರ ಕೂಳೂರು ಮೈದಾನದ ಬಳಿಗೆ ಆಗಮಿಸಿದ್ದರು. ಆದರೆ, ಅಲ್ಲಿನ ವಾಚ್ಮೆನ್ ಮೈದಾನದ ಒಳಗಡೆ ಪ್ರವೇಶಿಸದಂತೆ ತಡೆಹಿಡಿದಿದ್ದ. ಕಾರ್ಮಿಕರಿಗೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಶಾಮಿಯಾನ, ಕುಡಿಯುವ ನೀರು, ಆಹಾರದ ವ್ಯವಸ್ಥೆ ಮಾಡಿರಲಿಲ್ಲ. ಯಾವುದೇ ಇಲಾಖೆಗಳ ಅಧಿಕಾರಿಗಳೂ ಸ್ಥಳದಲ್ಲಿರಲಿಲ್ಲ. ಹಾಗಾಗಿ ಗೊಂದಲಕ್ಕೀಡಾಗಿದ್ದ ಕಾರ್ಮಿಕರು ರಸ್ತೆಯಲ್ಲೇ ಆಕ್ರೋಶ ವ್ಯಕ್ತಪಡಿಸಲಾರಂಭಿಸಿದರು.


Spread the love

Exit mobile version