Spread the love
ಮಂಗಳೂರು ವಿಮಾನ ದುರಂತಕ್ಕೆ ಎಂಟು ವರ್ಷ; ಮಡಿದವರಿಗೆ ಶೃದ್ಧಾಂಜಲಿ ಅರ್ಪಿಸಿದ ದಕ ಜಿಲ್ಲಾಡಳಿತ
ಮಂಗಳೂರು: ಎಂಟು ವರ್ಷಗಳ ಹಿಂದೆ ಬಜ್ಪೆ ವಿಮಾನ ದುರಂತದಲ್ಲಿ ಮಡಿದವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಇಂದು ಕೂಳೂರಿನ ಸ್ಮಾರಕ ಉದ್ಯಾನವನದಲ್ಲಿ ನಡೆಯಿತು.
ದಕ ಜಿಲ್ಲಾಡಳೀತ, ನವಮಂಗಳೂರು ಬಂದರು ಮಂಡಳಿ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ವೈಶಾಲಿ, ದಕ ಜಿಪಂ ಸಿಇಒ ಡಾ. ಎಂ. ಆರ್. ರವಿ, ಡಿಸಿಪಿ ಉಮಾ ಪ್ರಶಾಂತ್ ಹಾಗೂ ಇತರರು ಉಪಸ್ಥಿತರಿದ್ದರು.
Spread the love