ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅಕ್ರಮ ಗಾಂಜಾ ಪತ್ತೆ ಓರ್ವನ ಸೆರೆ
ಮಂಗಳೂರು ನಗರಕ್ಕೆ ಕೇರಳದಿಂದ ಗಾಂಜಾವನ್ನು ಅಕ್ರಮವಾಗಿ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಒಬ್ಬಾತನನ್ನು ಗಾಂಜಾ ಸಾಗಾಟ ಮಾಡುತ್ತಿದ್ದ ಕಾರು ಸಮೇತ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ದಿನಾಂಕ 21-07-2018 ರಂದು ಮಂಗಳೂರು ನಗರಕ್ಕೆ ಕೇರಳದಿಂದ ಅಕ್ರಮವಾಗಿ ಗಾಂಜಾವನ್ನು ಕಾರಿನಲ್ಲಿ ತಂದು ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಟೋಲ್ ಗೇಟ್ ಬಳಿ ಕೆಂಪು ಬಣ್ಣದ ಕೆಎ-19-ಎಂಸಿ-1743 ನೇ ನಂಬ್ರದ ಹುಂಡೈ ಇಯಾನ್ ಕಾರನ್ನು ಪತ್ತೆ ಹಚ್ಚಿ ಅಕ್ರಮವಾಗಿ ಗಾಂಜಾವನ್ನು ಹೊಂದಿದ್ದ.
ಕೇಶವ ಸನಿಲ್ ಪ್ರಾಯ 47 ವರ್ಷ ತಂದೆ: ಸೇಸಪ್ಪಕರ್ಕೇರ, ವಾಸ: ಸೈಟ್ ನಂಬ್ರ 314, 5ನೇ ಬ್ಲಾಕ್ ಕೃಷ್ಣಾಪುರ, ಕಾಟಿಪಳ್ಳ ಅಂಚೆ, ಮಂಗಳೂರು ತಾಲೂಕು. ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ 1.830 ಕೆಜಿ ಗಾಂಜಾ, ಮೊಬೈಲ್ ಫೋನ್-1 ಹಾಗೂ ಕೆಎ-19-ಎಂಸಿ-1743 ನೇ ಹುಂಡೈ ಇಯಾನ್ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,85,500/- ಆಗಿರುತ್ತದೆ. ಈ ಗಾಂಜಾವನ್ನು ಆರೋಪಿಯು ಕೇರಳ ಮೂಲದ ವ್ಯಕ್ತಿಯೊಬ್ಬನಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ತಂದಿರುವುದಾಗಿದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಗಾಂಜಾ, ಮೊಬೈಲ್ ಫೋನ್ ಹಾಗೂ ಕಾರನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿ ಕೇಶವ ಸನಿಲ್ ಎಂಬಾತನ ವಿರುದ್ಧ ಈ ಹಿಂದೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ , ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 12 ಪ್ರಕರಣ, ಪಣಂಬೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಗಾಂಜಾ ಪ್ರಕರಣ, ಹೀಗೆ ಒಟ್ಟು 15 ಪ್ರಕರಣ ದಾಖಲಾಗಿರುತ್ತದೆ.
ಪೊಲೀಸ್ ಕಮೀಷನರ್ ಶ್ರೀ ಟಿ. ಆರ್ ಸುರೇಶ್, ಐಪಿಎಸ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಯವರಾದ ಶ್ರೀ ಹನುಮಂತರಾಯ, ಹಾಗೂ ಅಪರಾಧ & ಸಂಚಾರ ವಿಭಾಗದ ಡಿಸಿಪಿಯವರಾದ ಶ್ರೀಮತಿ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ ಮತ್ತು ಪಿ.ಎಸ್.ಐ ರವರಾದ ಶ್ಯಾಮ್ ಸುಂದರ್ ಹೆಚ್ ಎಂ, ಕಬ್ಬಾಳ್ ರಾಜ್ ಹೆಚ್ ಡಿ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.