Home Mangalorean News Kannada News ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Spread the love

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

ಮಂಗಳೂರು: ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರಕ್ಕೆ ಒರಿಸ್ಸಾದಿಂದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರಕ್ಕೆ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು  ಅವರ ವಶದಿಂದ 2,60,000/- ರೂ ಮೌಲ್ಯದ 8 ಕೆಜಿ 650 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 3 ಲಕ್ಷ ಆಗಬಹುದು. ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಒರಿಸ್ಸಾದಿಂದ ಗಾಂಜಾವನ್ನು ಖರೀದಿಸಿಕೊಂಡು ಬೆಂಗಳೂರಿಗೆ ರೈಲಿನಲ್ಲಿ ಬಂದು ಅಲ್ಲಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಾಟ ಮಾಡಿಕೊಂಡು ಕರ್ನಾಟಕ, ಕೇರಳ ರಾಜ್ಯದ  ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ.

ಈ ಮಾದಕ ವಸ್ತು ಗಾಂಜಾ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


Spread the love

Exit mobile version