ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

Spread the love

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

ಮಂಡ್ಯ: ಚುನಾವಣಾ ಆಯೋಗವು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದೆ.

2024-25ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನಾವಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ.

ಜ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಮತದಾರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments