ಮಟ್ಕಾ ದಂಧೆ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ
ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.
ಬಂಧಿತರನ್ನು ಮಂಗಳೂರು ಜೆಪ್ಪಿನಮೊಗೆರು ನಿವಾಸಿ ಗಣೇಶ್ ಶೆಟ್ಟಿ (59) ಮತ್ತು ಉಳ್ಳಾಲ ನಿವಾಸಿ ವಿನಯ್ (57) ಎಂದು ಗುರುತಿಸಲಾಗಿದೆ.
ನವೆಂಬರ್ 3ರಂದು ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆಯನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಟ್ಕಾ ದಂಧೆಯಲ್ಲಿ ನಿರತರಾಗಿದ್ದ ಗಣೇಶ್ ಶೆಟ್ಟಿ ಮತ್ತು ವಿನಯ್ ರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಮಟ್ಕಾ ಆಟಕ್ಕೆ ಬಳಸಿದ ರೂ. 11,016/-ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐಯವರಾದ ಶ್ಯಾಮ್ ಸುಂದರ್ ಹೆಚ್ ಎಂ, ಕಬ್ಬಾಳ್ ರಾಜ್, ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.