Home Mangalorean News Kannada News ಮಣಿಪಾಲ: ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ: ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ಮಣಿಪಾಲ: ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಸಮೀಪದ ಹೆರ್ಗದಲ್ಲಿ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಎಂದು ಗುರುತಿಸಲಾಗಿದೆ.

ಯುವತಿ ಶ್ರೀನಿಧಿ ಶೆಟ್ಟಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಡಯಾಲಿಸಿಸ್ ಹಿನ್ನಲೆಯಲ್ಲಿ ಮೃತಳ ತಂದೆಯಾದ ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಹಾಗೂ ಮಗಳೊಂದಿಗೆ ಮಹೇಶ್ ವಾಸವಾಗಿದ್ದರು. ಬಾಡಿಗೆ ಮನೆಯ ರೂಮ್ನಲ್ಲಿ ಯಾರು ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.


Spread the love

Exit mobile version