Home Mangalorean News Kannada News ಮಣ್ಣಗುಡ್ಡ 30 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಗುದ್ದಲಿಪೂಜೆ

ಮಣ್ಣಗುಡ್ಡ 30 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಗುದ್ದಲಿಪೂಜೆ

Spread the love

ಮಣ್ಣಗುಡ್ಡ 30 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಗುದ್ದಲಿಪೂಜೆ

ಮಂಗಳೂರು:  ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ ವಾರ್ಡಿನ ಮಂಗಳ ಕ್ರೀಡಾಂಗಣದ ಸಮೀಪ 30 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯುವ ತಡೆಗೋಡೆ ರಚನೆಯ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.

ಈ ಕುರಿತು ಮಾತನಾಡಿದ ಶಾಸಕರು,ಈ ಹಿಂದೆ ಸ್ಥಳೀಯರು ನನ್ನನ್ನು ಭೇಟಿ ಮಾಡಿ ತಡೆಗೋಡೆಯ ಕಾಮಗಾರಿ ನಡೆಸುವಂತೆ ಕೇಳಿಕೊಂಡಿದ್ದರು. ಕೇಂದ್ರ ಸರಕಾರದಿಂದ ನೀಡಲಾಗುವ ಹದಿನಾಲ್ಕನೇ ಹಣಕಾಸು ವ್ಯವಸ್ಥೆಯ ಅನುದಾನದಡಿಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. 30 ಲಕ್ಷ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು,ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು‌.

ಕಾಮಗಾರಿ ನಡೆಯುವ ಸಂಧರ್ಭದಲ್ಲಿ ಸಾರ್ವಜನಿಕರಿಗೆ ಸ್ವಲ್ಪ ಸಮಸ್ಯೆಗಳಾಗಬಹುದು. ಅಭಿವೃದ್ಧಿಯ ದೃಷ್ಠಿಯಲ್ಲಿ ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಬೇಕು. ಭಾರತದಲ್ಲಿ ಮಂಗಳೂರನ್ನು ಮಾದರಿ ಕ್ಷೇತ್ರವನ್ನಾಗಿಸಿ ಪರಿವರ್ತಿಸುವ ಕನಸಿದೆ. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸರಕಾರದಿಂದ ಅನುದಾನ ಒದಗಿಸಿ, ಅಭಿವೃದ್ಧಿ ಕಾಮಗಾರಿಗಳು ಸಾಗಾರೋಪಾದಿಯಲ್ಲಿ ನಡೆಯುವಂತೆ ಅವಿರತವಾಗಿ ಶ್ರಮಿಸುತ್ತೇನೆ.ಈ ಹಿಂದೆ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂಧರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಮೂರು ಕಂತುಗಳಲ್ಲಿ ನೂರು ಕೋಟಿಯಂತೆ ಸುಮಾರು ಮುನ್ನೂರು ಕೋಟಿ ರೂಪಾಯಿ ಬೃಹತ್ ಮೊತ್ತದ ಅನುದಾನವನ್ನು ಒದಗಿಸಿದ್ದರು‌. ಇತ್ತೀಚೆಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ನೂರು ಕೋಟಿಗೂ ಅಧಿಕ ಮೊತ್ತದ ಅನುದಾನವನ್ನು ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡಿದ್ದಾರೆ.ಮುಂದೆಯೂ ಕೂಡ ಮಂಗಳೂರಿನ ಅಭಿವೃದ್ಧಿಗಾಗಿ ಅನುದಾನ ತರಲು ಶ್ರಮಿಸುತ್ತೇನೆ ಎಂದರು.

ಈ ಸಂಧರ್ಭದಲ್ಲಿ ಜಯಂತಿ ಆಚಾರ್,ಮೋಹನ್ ಆಚಾರ್,ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಹೆಗ್ಡೆ, ವಸಂತ್ ಜೆ ಪೂಜಾರಿ, ವಾಮನ್ ಶೆಣೈ, ಗೋಕುಲ್ ದಾಸ್ ಭಟ್, ಗುರುಚರಣ್, ಹರೀಶ್ ಬೋಳೂರು,ಸ್ಥಳೀಯರಾದ ರಾಮ್ ಮೋಹನ್ ರಾವ್ ಮುಂತಾದವರು ಉಪಸ್ಥಿತರಿದ್ದರು.


Spread the love

Exit mobile version