Home Mangalorean News Kannada News ಮದ್ಯವ್ಯಸನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ

ಮದ್ಯವ್ಯಸನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ

Spread the love

ಮದ್ಯವ್ಯಸನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ

ಚಾಮರಾಜನಗರ: ಕುಡಿದ ಅಮಲಿನಲ್ಲಿ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕೆರೆಯಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದ ದೇವರಾಜು(28) ಆತ್ಮಹತ್ಯೆಗೆ ಶರಣಾದವನು. ಈತ ಕುಡಿತದ ದಾಸನಾಗಿದ್ದನಂತೆ ಹೀಗಾಗಿ ಕುಡಿದ ಅಮಲಿನಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬರಗಿ ಕೆರೆಯಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಗುಂಡ್ಲುಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ಸಹಾಯದಿಂದ ಮೇಲೆತ್ತಿದ್ದಾರೆ. ತದ ನಂತರ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಮರಣೋತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version