Home Mangalorean News Kannada News ಮನೆ ಕಳ್ಳತನ: ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಸಹಿತ ಐವರು ವಶಕ್ಕೆ

ಮನೆ ಕಳ್ಳತನ: ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಸಹಿತ ಐವರು ವಶಕ್ಕೆ

Spread the love

ಮನೆ ಕಳ್ಳತನ: ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಸಹಿತ ಐವರು ವಶಕ್ಕೆ

ಉಳ್ಳಾಲ: ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸೇರಿಂದಂತೆ ಐವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಶ್ರೇಯಸ್ಸ್ ಬೆಳ್ತಂಗಡಿ, ಪೃಥ್ವಿರಾಜ್ ಉರ್ವ ಮತ್ತು ತೌಸೀಫ್ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಬಂಧಿತರು

ದಿನಾಂಕ: 28-06-2024 ರಂದು ಸಂಜೆ 6:30 ಗಂಟೆಯ ಸಮಯಕ್ಕೆ ಉಳ್ಳಾಲ ಧರ್ಮನಗರದ ವಾಸಿ  ಶ್ರೀಧರ ಎನ್ನುವವರು ಠಾಣೆಗೆ ಹಾಜರಾಗಿ ತನ್ನ ಮನೆಯ ಮಲಗುವ ಕೋಣೆಯ ಕಪಾಟಿನಲ್ಲಿರಿಸಿದ್ದ ಸುಮಾರು 32 ಪವನ್ ಗಿಂತಲೂ ಹೆಚ್ಚಿದ್ದ ಸುಮಾರು 15 ಲಕ್ಷ ಬೆಲೆಬಾಳುವ ಚಿನ್ನಾಭರಣಗಳನ್ನು ಯಾರೋ ಕಳ್ಳರು ದಿನಾಂಕ: 08-06-2024 ರ ಬೆಳಿಗ್ಗೆ ಸುಮಾರು 08:00 ಗಂಟೆಯಿಂದ ದಿನಾಂಕ: 16-06-2024 ರ ಮಧ್ಯಾಹ್ನ ಸುಮಾರು 12:00 ಗಂಟೆಯ ಮಧ್ಯಾವಧಿಯಲ್ಲಿ ಕಳವು ಮಾಡಿಕೊಂಡು ಹೋಗಿರುತ್ತಾರೆ ಪತ್ತೆ ಹಚ್ಚಿಕೊಡಬೇಕೆಂದು ಕೋರಿಕೊಂಡು ಸಲ್ಲಿಸಿದ ದೂರಿನನ್ವಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೊ. ಸಂಖ್ಯೆ. 124/2024 ಕಲಂ: 380 ಭಾದಂಸಂ ಅನ್ವಯ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆಯನ್ನು ಕೈಗೊಂಡ ಉಳ್ಳಾಲ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ರವರು ಅವರ ಸಿಬ್ಬಂದಿಯವರೊಂದಿಗೆ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್, ಪೊಲೀಸ್ ಉಪ ಆಯುಕ್ತರು (ಕಾ. ಸು) ಸಿದ್ಧಾರ್ಥ ಗೋಯಲ್, ಮಾನ್ಯ ಪೊಲೀಸ್ ಉಪ ಆಯುಕ್ತರು (ಅ.ಸಂ) ಬಿ ಪಿ ದಿನೇಶ್ ಕುಮಾರ್ ಹಾಗೂ ಎ.ಸಿ.ಪಿ ದಕ್ಷಿಣ ಶ್ರೀಮತಿ ಧನ್ಯ ನಾಯಕ್ ರವರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಪತ್ತೆ ಕಾರ್ಯದಲ್ಲಿ ತೊಡಗಿ ಕಾನೂನಿನ ಸಂಘರ್ಷಕ್ಕೊಳಗಾದ ಇಬ್ಬರು ಬಾಲಕರು ಸೇರಿದಂತೆ ಆರೋಪಿಗಳಾದ ಶ್ರೇಯಸ್ಸ್ ಬೆಳ್ತಂಗಡಿ, ಪೃಥ್ವಿರಾಜ್ ಉರ್ವ ಮತ್ತು ತೌಸೀಫ್ ಬೆಳ್ತಂಗಡಿರವರನ್ನು ವಶಕ್ಕೆ ಪಡೆದು ಅವರು ಕಳವು ಮಾಡಿ ಮಂಗಳೂರು ನಗರದ ವಿವಿಧ ಚಿನ್ನಾಭರಣ ಅಂಗಡಿಗಳಿಗೆ ಮಾರಾಟ ಮಾಡಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಆರೋಪಿಗಳಾದ ಶ್ರೇಯಸ್ಸ್ ಬೆಳ್ತಂಗಡಿ, ಪೃಥ್ವಿರಾಜ್ ಉರ್ವ ಮತ್ತು ತೌಸೀಫ್ ಬೆಳ್ತಂಗಡಿ ರವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಅವರುಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂಘರ್ಷಕ್ಕೊಳಗಾದ ಬಾಲಕರ ವಿರುದ್ಧ ಜೆ.ಜೆ ನ್ಯಾಯಾಲಯಕ್ಕೆ ವರಧಿ ಸಲ್ಲಿಸಲಾಗಿದೆ.


Spread the love

Exit mobile version