Home Mangalorean News Kannada News ಮರಳುಗಾರಿಕೆ: 6 ಇಲಾಖೆಗಳ ಅಧಿಕಾರಿಗಳ ಸಮಿತಿ ರಚನೆ

ಮರಳುಗಾರಿಕೆ: 6 ಇಲಾಖೆಗಳ ಅಧಿಕಾರಿಗಳ ಸಮಿತಿ ರಚನೆ

Spread the love
RedditLinkedinYoutubeEmailFacebook MessengerTelegramWhatsapp

ಮರಳುಗಾರಿಕೆ: 6 ಇಲಾಖೆಗಳ ಅಧಿಕಾರಿಗಳ ಸಮಿತಿ ರಚನೆ

ಮ0ಗಳೂರು : ಸಿಆರ್ ಝಡ್ ಪ್ರದೇಶದಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವ ಸಂಬಂಧ ಪರಿಶೀಲನೆ ನಡೆಸಲು 6 ಇಲಾಖೆಗಳ ಅಧಿಕಾರಿಗಳ ಸಮಿತಿಯನ್ನು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ರಚಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಇದನ್ನು ತಿಳಿಸಿದರು. ಸಿಆರ್ ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವ ಸಂಬಂಧ ರಾಷ್ಟ್ರೀಯ ಹಸಿರು ಪೀಠ ನೀಡಿದ ಆದೇಶದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಈಗಾಗಲೇ ವರದಿ ಸಲ್ಲಿಸಿದೆ. ಈ ವರದಿಯನ್ನು ಪರಿಶೀಲಿಸಿ, ಸ್ಥಳ ಪರಿವೀಕ್ಷಣೆ ಮಾಡಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು. ಸಮಿತಿಯಲ್ಲಿ ಲೋಕೋಪಯೋಗಿ, ಮೀನುಗಾರಿಕೆ, ಸಣ್ಣ ನೀರಾವರಿ, ಬೃಹತ್ ನೀರಾವರಿ ಇಲಾಖೆಗಳು, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಿಆರ್ ಝಡ್ ಅಧಿಕಾರಿಗಳು ಇದ್ದಾರೆ.

ಸಭೆಯಲ್ಲಿ ಅಧಿಕಾರಿಗಳು, ಮರಳುಗಾರಿಕೆ ಸಂಘಟನೆಗಳ ಮುಖಂಡರು, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.


Spread the love
RedditLinkedinYoutubeEmailFacebook MessengerTelegramWhatsapp

Exit mobile version