ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Spread the love

ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ, ಮಸೀದಿಯ ಜಮೀನಿನ ವಿವಾದಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಅರ್ಜಿ

ಮಂಗಳೂರು: ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗ ಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ.

ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖೀಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಸ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದಿನ ದಾಖಲೆ ಬದಲಾಯಿಸಬಾರದು. ಈ ಬಗ್ಗೆ ಸಿವಿಲ್ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ ಪ್ರಕ್ರಿಯೆ ನಡೆಸಬಾರದು ಎಂದು ವಿಹಿಂಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ನಾವು ಸಲ್ಲಿಸಿರುವ ಅರ್ಜಿಯನ್ನು ಸಹಾಯಕ ಆಯುಕ್ತರು ತಿರಸ್ಕರಿಸಿದ್ದಾರೆ. ಹಾಗಾಗಿ ನಾವು ಹೈಕೋರ್ಟ್ ಮೆಟ್ಟಿಲೇರಿದ್ದೇವೆ ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ ವೆಲ್ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments