Home Mangalorean News Kannada News ಮಳೆಗಾಲ: ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಮಳೆಗಾಲ: ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Spread the love

ಮಳೆಗಾಲ: ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಮ0ಗಳೂರು/ಉಡುಪಿ : ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ, 1986 ಅನ್ವಯ ಕರ್ನಾಟಕ ಸರ್ಕಾರವು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.

ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಲು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.


Spread the love

Exit mobile version