ಮಸೀದಿ ಮುಂದೆ ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗಿದರೆ ತಪ್ಪಲ್ಲ: ಹೈಕೋರ್ಟ್
ಮಂಗಳೂರು: ‘ಭಾರತ್ ಮಾತಾ ಕಿ ಜೈ’ ಘೋಷಣೆಯು ಸಾಮರಸ್ಯ ವನ್ನು ಉತ್ತೇಜಿಸುತ್ತದೆ ಹೊರತು ವೈಷಮ್ಯ ಹರಡುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮಸೀದಿ ಮುಂದೆ ಪ್ರತಿಭಟನೆ ನಡೆಸಿ “ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ ಸಂಬಂಧ ಎರಡು ಧರ್ಮಗಳ ವಿರುದ್ಧ ದ್ವೇಷ ಹರಡುವ ಆರೋಪದ ಮೇಲೆ ಮಂಗಳೂರಿನ ಸುರೇಶ್ ಸೇರಿ ಐವರು ಹಿಂದು ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ನ್ಯಾಯಮೂರ್ತಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಕಳೆದ ಜೂ.9ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕಾರ ಸ್ವೀಕಾರ ಸಮಾರಂಭ ವೀಕ್ಷಣೆ ಬಳಕ ಅರ್ಜಿದಾರರು ಮನೆಗೆ ವಾಪಸ್ಸಾಗು ತ್ತಿದ್ದರು. ಈ ವೇಳೆ 25 ಜನರಿದ್ದ ಒಂದು ಗುಂಪು ಅರ್ಜಿದಾರರನ್ನು ತಡೆದು, ಏಕೆ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುತ್ತಿದ್ದೀರಾ ಎಂದು ಆಕ್ಷೇಪಿಸಿತ್ತು. ಆಸಂದರ್ಭದಲ್ಲಿ ಅರ್ಜಿದಾರರೊಬ್ಬರಿಗೆ ಚಾಕುವಿಂದ ಚುಚ್ಚಲಾಗಿತ್ತು. ಈ ಕುರಿತು ಅರ್ಜಿದಾರರು ದೂರು ದಾಖಲಿಸಿದ್ದರು.
ಆದರೆ, ಮರು ದಿನ ಮಸೀದಿಯ ಪಿ.ಕೆ.ಅಬ್ದುಲ್ಲಾ ಎಂಬಾತ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿ, ಅರ್ಜಿದಾರರು ಮಸೀದಿ ಮುಂದೆ 11 ಬಂದು ಬೆದರಿಕೆ ಹಾಕಿದರು ಎಂದು ಆರೋಪಿಸಿದ್ದರು. ಅದರಂತೆ ಪೊಲೀಸರು ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಎರಡು ಧರ್ಮಗಳ ನಡುವೆ ದ್ವೇಷ ಹರಡಿದ ಆರೋಪದಡಿ ಸುರೇಶ್, ವಿನಯ್, ಸುಭಾಷ್, ರಂಜಿತ್ ಹಾಗೂ ಧನಂಜಯ್ ವಿರುದ್ದ ಪ್ರಕರಣ ದಾಖಲಾಗಿತ್ತು ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದರು.